Connect with us

Hi, what are you looking for?

Diksoochi News

ರಾಜ್ಯ

ನೈಟ್ ಕರ್ಫ್ಯೂ ಮಾರ್ಗಸೂಚಿ : ಯಾವುದಕ್ಕೆ ಅನುಮತಿ? ಯಾವುದಕ್ಕೆ ಇಲ್ಲ?

4

ಬೆಂಗಳೂರು: ಕೊರೋನಾ ಹಾಗೂ ಓಮಿಕ್ರಾನ್ ನಿಯಂತ್ರಣಕ್ಕೆ ತಡೆ ನೀಡೋ ಕಾರಣದಿಂದಾಗಿ ಡಿಸೆಂಬರ್ 28 ಜಾರಿಗೆ ಬರುವಂತೆ 10 ದಿನಗಳ ಕಾಲ ನೈಟ್ ಕರ್ಪ್ಯೂ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ.

ಜೊತೆಗೆ ಡಿಸೆಂಬರ್ 30 ರಿಂದ ಜನವರಿ 2ರವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ ಗಳಿಗೆ ಶೇ.50ರಷ್ಟು ಜನರಿಗೆ ಮಿತಿಯನ್ನು ಹೇರಿ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ನೂತನ ಮಾರ್ಗಸೂಚಿಯನ್ನು ಪ್ರಕಟಿಸಿದ್ದಾರೆ. ದಿನಾಂಕ 28-12-2021ರಿಂದ 07-01-2022 ರವರೆಗೆ ರಾಜ್ಯಾದ್ಯಂತ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿದೆ.

Advertisement. Scroll to continue reading.

ದಿನಾಂಕ 30-12-2021ರಿಂದ ದಿನಾಂಕ 02-01-2022ರವರೆಗೆ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ಪಬ್ ಗಳಲ್ಲಿ ಶೇ.50ರಷ್ಟು ಜನರು ಸೇರೋದಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ಸಿಬ್ಬಂದಿಗಳು ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಅಲ್ಲದೇ ಸಂಪೂರ್ಣ ಲಸಿಕೆ ಪಡೆದವರಿಗೆ ಮಾತ್ರವೇ ಅವಕಾಶ ನೀಡುವಂತೆ ಸೂಚನೆ ನೀಡಲಾಗಿದೆ.

28-12-2022ರಿಂದ ಸಭೆ, ಸಮಾರಂಭ, ಕಾನ್ಫೆರೆನ್ಸ್, ಮದುವೆ ಸೇರಿದಂತೆ ಇತರೆ ಹೆಚ್ಚು ಜನರು ಸೇರುವಂತ ಕಾರ್ಯಕ್ರಮಗಳಿಗೆ 300 ಜನರಿಗೆ ಮಾತ್ರವೇ ಸೇರೋದಕ್ಕೆ ಅವಕಾಶ ನೀಡಲಾಗಿದೆ. ಈ ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಇನ್ನೂ ರಾಜ್ಯದ ಗಡಿ ಭಾಗಗಳಲ್ಲಿ ಅದರಲ್ಲೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ತಪಾಸಣೆಗೆ ಹಾಗೂ ಕೋವಿಡ್ ನೆಗೆಟಿವ್, ಇಲ್ಲವೇ ಸಂಪೂರ್ಣ ಲಸಿಕೆ ಪಡೆದಿರೋ ವರದಿ ಕಡ್ಡಾಯವಾಗಿ ಪರಿಶೀಲಿಸುವಂತೆ ತಿಳಿಸಲಾಗಿದೆ.

ನೈಟ್ ಕರ್ಪ್ಯೂ : ಯಾವುಕ್ಕೆ ಅನುಮತಿ? ಯಾವುದಕ್ಕೆ ಇಲ್ಲ?:

Advertisement. Scroll to continue reading.
  • ನೈಟ್ ಕರ್ಪ್ಯೂ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶ ಇರವುದಿಲ್ಲ. ಟ್ಯಾಕ್ಸಿ, ಬಸ್, ಆಟೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರಾತ್ರಿ ಸಂದರ್ಭದಲ್ಲಿ ಬಸ್, ಟ್ರೈನ್, ಮೆಟ್ರೋ ರೈಲ್ ಹಾಗೂ ವಿಮಾನ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
  • ರಾತ್ರಿ ಕರ್ಪ್ಯೂ ಸಂದರ್ಭದಲ್ಲಿ ಕೇವಲ ತುರ್ತು ಸಂದರ್ಭದಲ್ಲಿ ಮಾತ್ರವೇ ಸಂಚಾರಕ್ಕೆ ಅವಕಾಶವನ್ನು ನೀಡಲಾಗಿದೆ. ಗೂಡ್ಸ್ ವೆಹಿಕಲ್, ಟ್ರಕ್, ಗೂಡ್ಸ್ ಕ್ಯಾರಿಯರ್, ಖಾಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
  • ರೋಗಿಗಳು, ರೋಗಿಗಳ ಅವಲಂಬಿತರಿಗೆ ತುರ್ತು ಸಂದರ್ಭದಲ್ಲಿ ಸಂಚಾರ ನಡೆಸಲು ಒಪ್ಪಿಗೆ ನೀಡಲಾಗಿದೆ.
  • ಎಲ್ಲಾ ಕೈಗಾರಿಕೆಗಳಿಗೆ ರಾತ್ರಿ ವೇಳೆಯಲ್ಲಿ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದ್ದು, ನೌಕರರು ಐಡಿ ಕಾರ್ಡ್ ತೋರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ.
  • ಟೆಲಿಕಾಂ, ಇಂಟರ್ನೆಟ್ ಪ್ರವೈಡರ್ ಓಡಾಟಕ್ಕೆ ಅವಕಾಶ ನೀಡಲಾಗಿದೆ.
  • ಅಗತ್ಯ ಸೇವೆ ಒದಗಿಸುವಂತ ಸಿಬ್ಬಂದಿಗಳ ಓಡಾಟಕ್ಕೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ.
  • ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂಗೆ ಮಾತ್ರವೇ ಅವಕಾಶ ನೀಡಲಾಗಿದೆ.
  • ಮೆಡಿಕಲ್ ಶಾಪ್ ಗಳು ನೈಟ್ ಕರ್ಪ್ಯೂ ಸಂದರ್ಭದಲ್ಲಿ ತೆರೆದಿರುತ್ತದೆ. ಯಾವುದೇ ಕಮರ್ಷಿಯಲ್ ಶಾಪ್ ಗಳನ್ನು ತೆರೆಯೋದಕ್ಕೆ ಅವಕಾಶವಿಲ್ಲ.
  • ಹೋಂ ಡಿಲಿವರಿ ಪುಡ್ ಸರಬರಾಜಿಗೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!