Connect with us

Hi, what are you looking for?

Diksoochi News

ರಾಜ್ಯ

ತೀರ್ಥಹಳ್ಳಿ : ಕನ್ನಡ ಶಾಲೆಯ ಮೇಲೆ ಪುಡಿ ರೌಡಿಗಳ ಅಟ್ಟಹಾಸ; ಸರಸ್ವತಿ, ಮಹಾತ್ಮ ಗಾಂಧೀಜಿ, ವಿವೇಕಾನಂದರ ವಿಗ್ರಹಗಳಿಗೆ ಹಾನಿ

0


ತೀರ್ಥಹಳ್ಳಿ : ಹಾರೋಗೂಳಿಗೆ ಪ್ರಾಥಮಿಕ ಶಾಲೆಯ ಆವರಣಕ್ಕೆ ನುಗ್ಗಿದ ದುಷ್ಕರ್ಮಿಗಳು ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಮತ್ತು ಸರಸ್ವತಿ ದೇವಿಯ ವಿಗ್ರಹಗಳನ್ನು ಧ್ವಂಸಮಾಡಿ ಶಾಲಾ ಹಿಂಭಾಗದಲ್ಲಿರುವ ಕೈತೋಟವನ್ನು ನಾಶಪಡಿಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪನವರ ಮನೆಯಿಂದ ಕೂಗಳತೆ ದೂರದಲ್ಲಿರುವ ಈ ಶಾಲೆಯು ಬಡವಿದ್ಯಾರ್ಥಿಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಜ್ಞಾನ ದಾಹವನ್ನು ನೀಗಿಸುತ್ತಿರುವ ಈ ಶಾಲೆಗೆ ಹಳೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತಮ್ಮ ಕೈಲಾದ ಮಟ್ಟಿಗೆ ಶಾಲೆಯ ಅಭಿವೃದ್ಧಿಗೆ ಶ್ರಮಿಸಿ, ಕೈತೋಟ, ಸರಸ್ವತಿ ದೇವಿ, ಮಹಾತ್ಮ ಗಾಂಧೀಜಿ ಮತ್ತು ವಿವೇಕಾನಂದರ ವಿಗ್ರಹಗಳನ್ನು ಸ್ಥಾಪಿಸಿ ಮಕ್ಕಳಿಗೆ ದೇಶಾಭಿಮಾನ ಮೂಡುವಲ್ಲಿ ಅವಿರತವಾಗಿ ಶ್ರಮವಹಿಸುತ್ತಿದ್ದರು. ಶಾಲಾ ಉಪಾಧ್ಯಾಯರುಗಳು ಮಕ್ಕಳಿಗೆ ಕೈತೋಟದ ಅರಿವನ್ನು ಮೂಡಿಸಿದ್ದರು.

ಇಂತಹ ದುಷ್ಕೃತ್ಯಗಳಿಗೆ ಹಾರೋಗೂಳಿಗೆ ಮತ್ತು ಅದರ ಸುತ್ತಮುತ್ತ ಇರುವ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವೆ ಕಾರಣವೆಂದು ಹೇಳಲಾಗುತ್ತಿದೆ. ರಾತ್ರಿಹೊತ್ತು ಕುಡಿದು ಗಲಾಟೆ ಮಾಡುವುದು ಹಳ್ಳಿಯಲ್ಲಿ ನಿರಂತರವಾಗಿ ನಡೆದು ಬರುತ್ತಿದೆ.
ಇಂತಹ ದುಷ್ಕೃತ್ಯವನ್ನು ಎಸಗಿದ ದುಷ್ಕರ್ಮಿಗಳ ವಿರುದ್ಧ ಪಂಚಾಯಿತಿ ಮತ್ತು ಶಾಲಾ ಮಂಡಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದೆ.
ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸುವಂತೆ ಹಾರೋಗೂಳಿಗೆಯ ಪ್ರಜ್ಞಾವಂತ ನಾಗರಿಕರು ಹಲವು ಬಾರಿ ಪ್ರಯತ್ನ ಮಾಡಿದರೂ ಸಹ ಹಾಗೂ ಪಂಚಾಯಿತಿಯಲ್ಲಿ ಈ ಬಗ್ಗೆ ನಿರ್ಣಯವನ್ನು ಕೈಗೊಂಡರೂ ಸಹ ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆ ನಿಷ್ಕ್ರಿಯತೆಯಿಂದ ಇಂತಹ ಕೃತ್ಯಗಳು ಹಳ್ಳಿಗಳಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿದೆ.

ಇನ್ನು ಮುಂದಾದರೂ ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ಜಾಗೃತರಾಗಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ಆಗದಂತೆ ತಡೆಯದಿದ್ದರೆ ಇನ್ನಷ್ಟು ಅನಾಹುತಗಳು ದೌರ್ಜನ್ಯಗಳು ಹಳ್ಳಿಗಳಲ್ಲಿ ನಡೆಯುವುದರಲ್ಲಿ ಸಂಶಯವಿಲ್ಲ.ಹೆಚ್. ಎಂ.ವೆಂಕಟೇಶ್
ಸಾಮಾಜಿಕ ಹೋರಾಟಗಾರ
ಹಾರೋಗೂಳಿಗೆ, ತೀರ್ಥಹಳ್ಳಿ ತಾಲೂಕು

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

error: Content is protected !!