ವರದಿ : ಬಿ.ಎಸ್. ಆಚಾರ್ಯ
ಬ್ರಹ್ಮಾವರ : ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳಾ ಸದಸ್ಯರು ಪ್ರಥಮವಾಗಿ ಸಾಮೂಹಿಕವಾಗಿ ನಾಲ್ಕು ಚಕ್ರದ ವಾಹನ ಚಾಲನಾ ತರಬೇತಿ ಪಡೆದುಕೊಂಡ ನೀವು ಉಡುಪಿ ಜಿಲ್ಲೆಗೆ ಮಾದರಿಯಾಗಿ ಕೆಲಸ ಮಾಡಿ ಎಂದು ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂಸ್ಥೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ಯ ಹೇಳಿದರು.
ಬುಧವಾರ ಬ್ರಹ್ಮಾವರ ರುಡ್‍ಸೆಟ್ ಸಂಸ್ಥೆಯಲ್ಲಿ ಉಡುಪಿ ಜಿಲ್ಲೆಯ ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂಸ್ಥೆಯಿಂದ 30 ದಿನಗಳ ಕಾಲ ನಡೆದ ಮಹಿಳಾ ಲಘು ವಾಹನ ಚಾಲನಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಸಂಸ್ಥೆಯ ನಿರ್ದೇಶಕ ಪಾಪ ನಾಯಕ್‍ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎನ್ ಆರ್ ಎಲ್ ಎಂ ನ ಜಿಲ್ಲಾ ವ್ಯವಸ್ಥಾಪಕಿ ಕುಮಾರಿ ನವ್ಯ, ರುಡ್‍ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಕರುಣಾಕರ ಜೈನ್ ಉಪಸ್ಥಿತರಿದ್ದರು.
ರುಡ್‍ಸೆಟ್ ಸಂಸ್ಥೆಯ ಉಪನ್ಯಾಸಕ ಸಂತೋಷ ಶೆಟ್ಟಿ ವಂದಿಸಿದರು.
30 ಕ್ಕೂ ಹೆಚ್ಚು ಮಹಿಳೆರು ವಾಹನ ಚಾಲನಾ ತರಬೇತಿ ಪಡೆದಿದ್ದರು.