ಕ್ರೀಡೆ : ನ್ಯೂಜಿಲೆಂಡ್ ತಂಡದ ಖ್ಯಾತ ಬ್ಯಾಟ್ಸ್‌ಮನ್ ರಾಸ್ ಟೇಲರ್ ಅಂತರಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
ಅವರು ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯಲಿದ್ದಾರೆ.
ಈ ಪಂದ್ಯ ಟೇಲರ್ ಅವರ 112ನೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವಾಗಿರಲಿದ್ದು, ಮುಂದಿನ ವರ್ಷ ಆಸ್ಟ್ರೇಲಿಯಾ ಮತ್ತು ನೆದರ್ಲೆಂಡ್ ವಿರುದ್ಧ ತಮ್ಮ ಕೊನೆಯ ಸೀಮಿತ ಓವರ್‌ಗಳ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Advertisement. Scroll to continue reading.

ಈ ಬಗ್ಗೆ ಟ್ವೀಟ್ ಮಾಡಿರುವ ರಾಸ್ ಟೇಲರ್, ಇದೊಂದು ಅದ್ಭುತವಾದ ಪ್ರಯಾಣವಾಗಿತ್ತು. ನನಗೆ ಸಾಧ್ಯವಿರುವವರೆಗೆ ನನ್ನ ದೇಶವನ್ನು ಪ್ರತಿನಿಧಿಸುವ ಅವಕಾಶ ದೊರೆತಿರುವುದಕ್ಕೆ ನಾನು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು ಮತ್ತು ಈ ಸಮಯವು ನನ್ನ ನಿವೃತ್ತಿಗೆ ಸರಿಯಾಗಿದೆ ಎಂದು ಹೇಳಿದ್ದಾರೆ.
In this article:cricket, Diksoochi news, diksoochi Tv, diksoochi udupi, Ross Taylor

Click to comment