ಬೆಂಗಳೂರು : ಇಂದಿನಿಂದ ನಗರಾದ್ಯಂತ ಕೊರೋನಾ ನಿಯಂತ್ರಣಕ್ಕಾಗಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ಕೊರೋನಾ ನಿಯಂತ್ರಣ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಹೇಳಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ದಿನಾಂಕ 05-01-2022 ರಿಂದ 19-01-2022ರವರೆಗೆ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಕರ್ಪ್ಯೂ ಹಾಗೂ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದೆ.
ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ನೈಟ್ ಕರ್ಪ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಸೋಮವಾರದಿಂದ ಗುರುವಾರದವರೆಗೆ ಜಾರಿಯಲ್ಲಿ ಇರಲಿದ್ದು, ವಾರಾಂತ್ಯ ಕರ್ಪ್ಯೂ ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿ ಇರಲಿದೆ.
ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ 144 ಸೆಕ್ಷನ್ ಅಡಿಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ನಿಯಮವನ್ನು ಜನರು ಪಾಲಿಸಬೇಕು. ನಿಯಮ ಮೀರುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 51 ರಿಂದ 60ರ ಅಡಿಯಲ್ಲಿ, ಐಪಿಸಿ ಸೆಕ್ಷನ್ 188 ಮತ್ತು ಸೆಕ್ಷನ್ 4, 5 ಮತ್ತು 10 ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.