Connect with us

Hi, what are you looking for?

Diksoochi News

ರಾಜ್ಯ

ವೀಕೆಂಡ್ ಕರ್ಫ್ಯೂ: ನಾಳೆ ರಾಜ್ಯದಾದ್ಯಂತ ಶಾಲೆಗಳಿಗೆ ರಜೆ : ಶಿಕ್ಷಣ ಇಲಾಖೆ ಆದೇಶ

4

ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಇಂದಿನಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದ್ದು, ಈಗಾಗಲೇ ಬೆಂಗಳೂರು ನಗರದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇದರೊಂದಿಗೆ ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ರಾಜ್ಯಾಧ್ಯಂತವೂ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ, ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ಓಮಿಕ್ರಾನ್, ಕೊರೋನಾ ನಿಯಂತ್ರಣದ ಸುರಕ್ಷತಾ ಕ್ರಮವಾಗಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಲ್ಲಿ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಈಗಾಗಲೇ ತಿಳಸಲಾಗಿದೆ

Advertisement. Scroll to continue reading.

ದಿನಾಂಕ 06-01-2022ರಿಂದ ದಿನಾಂಕ 19-01-2022ರವರೆಗೆ ಅಥವಾ ಮುಂದಿನ ಆದೇಶದವರೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ 10ನೇ ತರಗತಿವರೆಗಿನ ಎಲ್ಲಾ ಶಾಲೆಗಳನ್ನು, ಕೋಚಿಂಗ್ ಸೆಂಟರ್ ಸ್ಥಗಿತಗೊಳಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.

ಮುಂದುವರೆದು, ದಿನಾಂಕ 05-01-2022 ರಿಂದ 19-01-2022ರ ಅವಧಿಯಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ, ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿರುವುದರಿಂದ, ಈ ಅವಧಿಯಲ್ಲಿ ಶನಿವಾರಗಳಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ನಡೆಸದಿರಲು ಕ್ರಮವಹಿಸುವಂತೆ ಆಯಾ ಜಿಲ್ಲೆಗಳ ಉಪ ನಿರ್ದೇಶಕರುಗಳಿಗೆ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!