Connect with us

Hi, what are you looking for?

Diksoochi News

ರಾಜ್ಯ

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

1

ಬೆಂಗಳೂರು : ಭೀಕರ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೈಸ್ ರಸ್ತೆಯಲ್ಲಿ ತಡರಾತ್ರಿ ನಡೆದಿದೆ.

ಕಾರ್ ನಲ್ಲಿದ್ದ ಫಾಸಿಲ್ (32), ಅಭಿಲಾಷ್ (24) ಶಿಲ್ಪಾ(30) ಸೇರಿ ನಾಲ್ವರು ಮೃತಪಟ್ಟವರು.

ಶುಕ್ರವಾರ ತಡರಾತ್ರಿ 3.45 ರ ಸುಮಾರಿಗೆ ತಮಿಳುನಾಡು ನೋಂದಣಿಯ ಲಾರಿಯೊಂದು ಬನ್ನೇರುಘಟ್ಟ ಕಡೆಯಿಂದ ಕನಕಪುರ ರಸ್ತೆಯ ಕಡೆಗೆ ವೇಗವಾಗಿ ಚಲಿಸುತ್ತಿತ್ತು. ಈ ವೇಳೆ ಪುರವಂಕರ ಅಪಾರ್ಟ್ ಮೆಂಟ್ ಬಳಿ ನಿಧಾನಗತಿಯ ವಾಹನ ಸಂಚಾರವಿತ್ತು. ಈ ವೇಳೆ ವೇಗವಾಗಿ ಬಂದ ಲಾರಿಯು ಹಿಂಬದಿಯಿಂದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಇದೇ ವೇಳೆ ಆ ಕಾರಿನ ಮುಂದೆ ಚಲಿಸುತ್ತಿದ್ದ ಕ್ವಾಲಿಸ್ ಗಾಡಿಯಲ್ಲೂ ಕೂಡ ನಾಲ್ವರೂ ಪ್ರಯಾಣಿಸುತ್ತಿದ್ದರು. ಅ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಸ್ವಿಪ್ಟ್ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಮಾರಸ್ವಾಮಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!