ಉಡುಪಿ : ಕೋವಿಡ್ ಹಾಗೂ ಒಮಿಕ್ರಾನ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಶುಕ್ರವಾರ ರಾತ್ರಿಯಿಂದ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿದೆ.
ಜಿಲ್ಲೆಯಾದ್ಯಂತ ಬಸ್ ಸಂಚಾರ ವಿರಳವಾಗಿದೆ. ಸಿಟಿ ಬಸ್, ಸರ್ವೀಸ್ ಬಸ್ , ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರವಿದ್ದು, ವಿರಳವಾಗಿದೆ. ಜನಸಂಚಾರವೂ ಕಡಿಮೆ ಸಂಖ್ಯೆಯಲ್ಲಿದೆ. ಇನ್ನು ರಿಕ್ಷಾ, ಟ್ಯಾಕ್ಸಿ ಸಂಚಾರವಿದೆ.
ಹೂ- ಹಣ್ಣು, ದಿನಸಿ, ಸೂಪರ್ ಮಾರ್ಕೆಟ್ ಗಳು, ಕೆಲವೊಂದು ತುರ್ತು ಸೇವೆಗಳನ್ನು ಹೊರತು ಪಡಿಸಿ, ಆಭರಣ ಮಳಿಗೆಗಳು, ಬಟ್ಟೆ, ಅಂಗಡಿಗಳು ಮೊದಲಾದವು ಮುಚ್ಚಿವೆ. ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Advertisement. Scroll to continue reading.