Connect with us

Hi, what are you looking for?

ಸಾಹಿತ್ಯ

ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್(ಚಂಪಾ) ಇನ್ನಿಲ್ಲ

1

ಬೆಂಗಳೂರು : ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ (83) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 6.30 ರ ಸುಮಾರಿಗೆ ನಿಧನರಾಗಿದ್ದಾರೆ.

ಕವಿ, ನಾಟಕಕಾರ….

ಚಂಪಾ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18 ರಂದು ಜನಿಸಿದರು.

Advertisement. Scroll to continue reading.

ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಪ್ರಾರಂಭಿಕ ಶಿಕ್ಷಣವನ್ನು ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ಪಡೆದರು. ಇಂಗ್ಲಿಷ್ ಎಂ.ಎ. ಪದವಿ ಗಳಿಸಿ, ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮ ಪಡೆದರು.

ಚಂದ್ರಶೇಖರ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರು.

ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳಲ್ಲಿ ಅವರು ಖ್ಯಾತರಾಗಿದ್ದಾರೆ.

ಕೃತಿಗಳು:

Advertisement. Scroll to continue reading.

ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ ಇತ್ಯಾದಿ

ಪ್ರಶಸ್ತಿಗಳು:

ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960, 74, 76), ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ, ಸಂದೇಶ್‌ ಮಾಧ್ಯಮ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, ಆಳ್ವಾಸ್‌ ನುಡಿಸಿರಿ ಪ್ರಶಸ್ತಿ ಮತ್ತು ಪಂಪ ಪ್ರಶಸ್ತಿ ಇತ್ಯಾದಿ. 2017 ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು, 2018 ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷತೆ:

Advertisement. Scroll to continue reading.

ಚಂಪಾ ಅವರು 2004-08ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.ಚಂಪಾ ಅವರು 2004-08ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಸಿಎಂ ಸಂತಾಪ:

ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾದ ವಿಷಯದಿಂದ ತುಂಭಾ ದುಃಖಿತನಾಗಿದ್ದೇನೆ.
ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ.

Advertisement. Scroll to continue reading.

ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ.

ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿಃ…

ಎಂದು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!