ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ್ ಅವರು ಇಂದು ನಿಧನರಾಗಿದ್ದು, ಇವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರ ಅಧೀನ ಕಾರ್ಯದರ್ಶಿ, ಹಿರಿಯ ಸಾಹಿತಿ ಹಾಗೂ ಮಾಜಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ್ ಅವರು, ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ.
ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ, ಕೋವಿಡ್-19ರ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿದ್ದಾರೆ.
Advertisement. Scroll to continue reading.
In this article:champa, Chandrasekhar pateela, Diksoochi news, diksoochi Tv, diksoochi udupi
Click to comment