ವರದಿ : ಬಿ.ಎಸ್.ಆಚಾರ್ಯ
ಕಾರ್ಕಳ: ಎನ್ .ಆರ್ .ಎಲ್ .ಎಂ .ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರಿಗೆ ಲಘು ವಾಹನ ತರಬೇತಿ ಕಾರ್ಯಕ್ರಮ ಕಾರ್ಕಳ ತಾಲೂಕು ಸಭಾಂಗಣದಲ್ಲಿ ನಡೆಯಿತು.
ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಾಧಿಕಾರಿ ಗುರುದತ್ ಎಂ .ಎನ್ .ಉದ್ಘಾಟಿಸಿ ಮಾತನಾಡಿ, ಸರ್ಕಾರದ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸ್ವ ಇಚ್ಛೆಯಿಂದ ತರಬೇತಿಗೆ ಹಾಜರಾಗಿ ಭವಿಷ್ಯದಲ್ಲಿ ಉತ್ತಮ ಚಾಲಕರಾಗಲು ಮುಂದೆ ಬಂದಿರುವ ಮಹಿಳೆಯರಿಗೆ ಶುಭ ಹಾರೈಸಿದರು. ಕೇವಲ ಹಪ್ಪಳ ಸಂಡಿಗೆ ಮಾತ್ರ ಮಾಡಿ ಜೀವನೋಪಾಯ ಸಾಗಿಸುವುದಲ್ಲದೇ ಇಂತಹ ಚಾಲನೆ ತರಬೇತಿ ಪಡೆದು ಉತ್ತಮ ಭವಿಷ್ಯ ಕಟ್ಟಿಕೊಳ್ಳಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಪಾಪನಾಯಕ್, ಎನ್ .ಆರ್ .ಎಲ್ .ಎಂ .ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವಾ ಪ್ರಾಸ್ತಾವಿಕ ಮಾತನಾಡಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಗಣೇಶ್ ನಾಯ್ಕ್ ನಿರೂಪಿಸಿ, ಸ್ವಾಗತಿಸಿದರು. ರುಡ್ಸೆಟ್ ಉಪನ್ಯಾಸಕ ಸಂತೋಷ್ ವಂದಿಸಿದರು.