ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಚಾರಾ ಶ್ರೀ ಮಹಿಷಮರ್ಧಿನೀ ಅಮ್ಮನವರ ವಾರ್ಷಿಕ ಜಾತ್ರಾಮಹೋತ್ಸವ ಸರಳ ರೀತಿಯಲ್ಲಿ ನಡೆಯಲಿದೆ.
ಹೆಬ್ರಿ ತಾಲೂಕಿನ ಚಾರಾ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀ ಮಹಿಷಮರ್ಧಿನೀ ಅಮ್ಮನವರ ಮತ್ತು ಮಹಾಗಣಪತಿ ದೇವಸ್ಥಾನ ಇದರ ವಾರ್ಷಿಕ ಜಾತ್ರಾ ಮಹೋತ್ಸವ ಪ್ರತಿವರ್ಷದಂತೆ ಜ.14 ರಂದು ಸರಕಾರದ ಕೋವಿಡ್ 19 ನಿಯಮಾವಳಿಯ ಮಾರ್ಗಸೂಚಿಯಂತೆ ಈ ಬಾರಿ ಸರಳವಾಗಿ, ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ನಡೆಸಲಾಗುವುದು.
ಆದರೆ ದೇವರ ದರ್ಶನಕ್ಕೆ ಬರುವ ಭಕ್ತಾಧಿಗಳು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವವರು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿದವರಿಗೆ ಸಾರ್ವಜನಿಕ ಅಂತರ ಕಾಪಾಡಿಕೊಂಡು ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
Advertisement. Scroll to continue reading.
ಹಣ್ಣು ಕಾಯಿ,ತೀರ್ಥಪ್ರಸಾದ, ಕೆಂಡಸೇವೆ ಹಾಗೂ ಯಾವುದೇ ಸೇವೆಗೆ ಅವಕಾಶ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮವೂ ಇರುವುದಿಲ್ಲ. ಆದುದರಿಂದ ಈ ಬಗ್ಗೆ ಭಕ್ತಾಧಿಗಳು ಸಹಕರಿಸಬೇಕಾಗಿ ದೇವಸ್ಥಾನದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.