Connect with us

Hi, what are you looking for?

ರಾಜ್ಯ

ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿ ತಾತ್ಕಾಲಿಕವಾಗಿ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ

1

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ, ಓಮಿಕ್ರಾನ್ ಸೋಂಕು ಹೆಚ್ಚಳವಾಗುತ್ತಿದೆ. ಹೀಗಾಗಿ ಸರ್ಕಾರಿ ನೌಕರರ ಹಿತದೃಷ್ಠಿಯಿಂದ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಹಲವಾರು ಕಡೆಯಲ್ಲಿ ಕೊರೋನಾ, ಒಮಿಕ್ರಾನ್ ವೈರಸ್ ಸೋಂಕು ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಸಚಿವಾಲಯ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರದ ಅಧಿಕಾರಿ, ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಮುಂದಿನ ಆದೇಶದವರೆಗೂ ವಿನಾಯಿತಿ ನೀಡಲಾಗಿದೆ.

ಆದರೆ, ಹಾಜರಾತಿ ಪುಸ್ತಕದಲ್ಲಿ ಸಹಿಯನ್ನು ನಿರ್ವಹಿಸುವಂತೆ ಮತ್ತು ಆಯಾ ಇಲಾಖೆಯ ನೋಡಲ್ ಅಧಿಕಾರಿಗಳು ಪರಿಶೀಲಿಸುವಂತೆ ಸೂಚಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

0 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

0 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!