ಬೆಂಗಳೂರು : ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ನ್ನು ಇಂದು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.
ಕೋವಿಡ್ ಹೆಚ್ಚಳದ ವೇಳೆ ಪಾದಯಾತ್ರೆ ನಡೆಸುತ್ತಿದ್ದೀರಾ? ಪಾದಯಾತ್ರೆಗೂ ಮುನ್ನ ನೀವು ಅನುಮತಿ ಪಡೆದಿದ್ದೀರಾ? ಎಂದು ಹೈಕೋರ್ಟ್ ವಿಭಾಗೀಯ ಪೀಠ ಕೆಪಿಸಿಸಿಗೆ ಪ್ರಶ್ನಿಸಿದ್ದು, ವಿಚಾರಣೆಯನ್ನು ಜನವರಿ 14 ಕ್ಕೆ ಮುಂದೂಡಿಕೆ ಮಾಡಿದೆ.
ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್ ಗೆ ಪಿಐಎಲ್ ಅರ್ಜಿ ಸಲ್ಲಿಕೆಯಾಗಿದೆ. ಇಂದು ಹೈಕೋರ್ಟ್ ವಿಭಾಗೀಯ ಪೀಠ ಪಿಐಎಲ್ ವಿಚಾರಣೆ ನಡೆಸಿದೆ.
ಮೇಕೆದಾಟು ಪಾದಯಾತ್ರೆ ವಿರುದ್ಧ ಈಗಾಗಲೇ ಮೂರು ಎಫ್ ಐಆರ್ ದಾಖಲಾಗಿದೆ ಎಂದು ಎಎಜಿ ಮಾಹಿತಿ ನೀಡಿದೆ. ಉತ್ತರಿಸಲು ನಾಳೆಯವರೆಗೆ ಕಾಲಾವಕಾಶ ನೀಡಿದ್ದು, ಅರ್ಜಿ ವಿಚಾರಣೆಯನ್ನು ಜನವರಿ 14 ಕ್ಕೆ ಮುಂದೂಡಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೈಕೋರ್ಟ್ ವಿಭಾಗೀಯ ಪೀಠ, ಸರ್ಕಾರ ಪಾದಯಾತ್ರೆ ತಡೆಯಲು ಅಸಮರ್ಥವಾಗಿದೆಯೇ? ಅನುಮತಿ ಕೊಟ್ಟಿಲ್ಲದಿದ್ದರೂ ಯಾರಿಗಾಗಿ ಕಾಯುತ್ತಿದ್ದೀರಿ? ಸರ್ಕಾರ ಸಂಪುರ್ಣ ಅಸಮರ್ಥವಾಗಿದೆ. ಸಾರ್ವಜನಿಕರ ಹಿತಾಸಕ್ತಿ ವಿರುದ್ಧ ಅನುಮತಿ ಇಲ್ಲದಿದ್ದರೂ ರ್ಯಾಲಿ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಸರ್ಕಾರ ಏಕೆ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.
ಇನ್ನು ಇದೇ ವೇಳೆ ಹೈಕೋರ್ಟ್ ಕೆಪಿಸಿಸಿಯನ್ನು ತರಾಟೆಗೆ ತೆಗೆದುಕೊಂಡಿದೆ. ಪಾದಯಾತ್ರೆಗೆ ಸರ್ಕಾರದ ಅನುಮತಿ ಪಡೆದಿದ್ದೀರಾ? ಪಾದಯಾತ್ರೆಯಲ್ಲಿ ಕೊರೋನಾ ಮಾರ್ಗಸೂಚಿ ಪಾಲಿಸಿದ್ದೀರಾ? ಎಂದು ಪ್ರಶ್ನಿಸಿದೆ.