ನವದೆಹಲಿ: ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಹಿರಿಯ ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ಅವರನ್ನು ಕೇಂದ್ರ ಬುಧವಾರ ನೇಮಿಸಿದೆ.
ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿದೆ.
ಜನವರಿ 22, 2018ರಿಂದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ (ವಿಎಸ್ ಎಸ್ ಸಿ) ನಿರ್ದೇಶಕರ ಮುಖ್ಯಸ್ಥರಾಗಿದ್ದಾರೆ. ಅವರು ಕೆ. ಶಿವನ್ ಅವರ ನಂತರ ವಿಶ್ವದ ಪ್ರಮುಖ ಬಾಹ್ಯಾಕಾಶ ಏಜೆನ್ಸಿಗಳಲ್ಲೊಂದರ ಮುಂದಿನ ಮುಖ್ಯಸ್ಥರಾಗಲಿದ್ದಾರೆ.
ಚಂದ್ರಯಾನ-2, GSAT-9 ಯೋಜನೆ ಸೇರಿದಂತೆ ಅನೇಕ ಯೋಜನೆಗಳಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ಸೋಮನಾಥ್ ಅವರನ್ನು ರಾಕೆಟ್ ವಿಜ್ಞಾನಿ ಎಂದು ಕರೆಯಲಾಗುತ್ತದೆ. ಕೊಲ್ಲಂನ ಟಿಕೆಂ ಕಾಲೇಜ್ ಆಫ್ ಇಂಜಿನಿಯರಿಂಗ್ ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರಾಗಿದ್ದಾರೆ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನಿಂದ ಏರೋಸ್ಪೇಸ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ.