ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿಜಿಸ್ಟರ್ ಬ್ರಹ್ಮಾವರ ತಾಲೂಕು ಬಾರ್ಕೂರು ವಲಯ, ಬೆಳ್ತಿ ಕೆರೆ ಅಭಿವೃದ್ಧಿ ಸಮಿತಿ ಹಾಗೂ ಬಾರ್ಕೂರು ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮೂರು ನಮ್ಮ ಕೆರೆ ಯೋಜನೆಯಲ್ಲಿ ಬೆಳ್ತಿಕೆರೆ ಹೂಳೆತ್ತುವ ಕಾರ್ಯಕ್ರಮವನ್ನು ಮಾಡಿದ್ದು, ಈ ದಿನ ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕರಾದ ಗಣೇಶ್ ಬಿ. ಕೆರೆಯ ನಾಮಫಲಕವನ್ನು ಲೋಕಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಊರಿನ ಹಿರಿಯರು ಕೆರೆಗೆ ಬಾಗಿನ ಅರ್ಪಿಸಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು ಹಾಗೂ ಕೆರೆಯ ನಿರ್ವಹಣಾ ಜವಾಬ್ದಾರಿಯನ್ನು ಬಾರ್ಕುರು ಗ್ರಾಮ ಪಂಚಾಯತ್ ಅಧ್ಯಕ್ಷ ಬಿ. ಶಾಂತಾರಾಮ ಶೆಟ್ಟಿ ಅವರಿಗೆ ಮನವಿಯ ಮೂಲಕ ಹಸ್ತಾಂತರಿಸಲಾಯಿತು. ನಂತರ ಸುಜ್ಞಾನ ನಿಧಿ ಶಿಷ್ಯವೇತನ ವಿತರಣಾ ಕಾರ್ಯಕ್ರಮವನ್ನು ಶ್ರೀ ರಾಮಮಂದಿರ ಬಾರ್ಕೂರಿನಲ್ಲಿ ಬಾರ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಬಿ ಶಾಂತರಾಮ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ತಾಲೂಕಿನಲ್ಲಿ 38 ವಿದ್ಯಾರ್ಥಿಗಳಿಗೆ ಈಗಾಗಲೇ ಮಂಜೂರಾದ ಸುಜ್ಞಾನ ನಿಧಿ ಶಿಷ್ಯವೇತನದ ಮಂಜೂರಾತಿ ಪತ್ರವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಬೆಳ್ತಿ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಶ್ರೀರಾಮ ಮಂದಿರ ಸಮಿತಿ ಅಧ್ಯಕ್ಷ ವೆಂಕಟ್ರಮಣ ಬಂಡಾರ್ಕರ್ ಅವರು, ಕೆರೆ ವಿಭಾಗದ ಅಭಿಯಂತರ ಭರತ್, ಬ್ರಹ್ಮವರ ತಾಲೂಕಿನ ಯೋಜನಾಧಿಕಾರಿ ದಿನೇಶ್, ಶಿವಗಿರಿ ಸಮಿತಿ ಅಧ್ಯಕ್ಷ ಜಯಾನಂದ್ ಎಮ್ . ಪೂಜಾರಿ, ವಲಯಾಧ್ಯಕ್ಷ ಗೌರಿ ಪೂಜಾರ್ತಿ ಉಪಸ್ಥಿತರಿದ್ದರು.
ಬ್ರಹ್ಮಾವರ ತಾಲೂಕಿನ ಆಂತರಿಕ ಲೆಕ್ಕಪರಿಶೋಧಕರ ಮಂಜುನಾಥ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ಸೇವಾ ಪ್ರತಿನಿಧಿ ಕುಸುಮಾ ಹೆಬ್ಬಾರ್ ವಂದಿಸಿದರು. ಬಾರ್ಕೂರು ವಲಯ ಮೇಲ್ವಿಚಾರಕಿ ಶಾಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.