ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ್ ಪತ್ನಿ ಸತ್ಯಭಾಮ ಕಂಬಾರ್ (76) ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸತ್ಯಭಾಮ ಕಂಬಾರ್ ಕೊನೆಯುಸಿರೆಳೆದಿದ್ದಾರೆ.
ಸತ್ಯಭಾಮ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಜನವರಿ 3 ರಂದು ಸತ್ಯಭಾಮ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ವಿಧಿವಶರಾಗಿದ್ದಾರೆ.
ಬೆಳಗ್ಗೆ 9-30 ಕ್ಕೆ ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Advertisement. Scroll to continue reading.