ಬೆಂಗಳೂರು : ತಜ್ಞರ ವರದಿ, ಅಭಿಪ್ರಾಯ ಆಧರಿಸಿ ವೀಕೆಂಡ್ ಕರ್ಪ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಮೂರನೇ ಅಲೆಯ ಪರಿಣಾಮ, ಸಿದ್ಧತೆಯ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮಧ್ಯಾಹ್ನ ಕೋವಿಡ್ ತಜ್ಞರು, ಸಚಿವ ಸಂಪುಟದ ಸಹೋದ್ಯೋಗಿಗಳ ಸಭೆ ಕರೆದಿದ್ದೇನೆ. ಕೇಂದ್ರ ಸಚಿವರುಗಳು ಕೂಡ ಕೋವಿಡ್ ಸಂಬಂಧ ಹಲವು ಸಲಹೆಗಳನ್ನು ನೀಡಿದ್ದಾರೆ. ತಜ್ಞರು ನೀಡುವ ವರದಿ, ಸಲಹೆ, ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ನಡೆಯುವ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್, ಉನ್ನತ ಶಿಕ್ಷಣ ಸಚಿವ ಡಾ.ಸಿ. ಎನ್ .ಅಶ್ವತ್ಥ್ ನಾರಾಯಣ ಸೇರಿದಂತೆ ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.
Advertisement. Scroll to continue reading.
In this article:cm bommai, Covid 19, Diksoochi news, diksoochi Tv, diksoochiudupi, weekend curfew
Click to comment