ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ವಾಪಾಸು ಪಡೆಯಲಾಗಿದೆ. ಆಸ್ಪತ್ರೆಗೆ ಸೇರುವ ಸಂಖ್ಯೆ ಹೆಚ್ಚಾದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗುವುದು ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಸಿಎಂ ನೇತೃತ್ವದ ತಜ್ಞರು, ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಎರಡೂವರೆ ಗಂಟೆಗಳ ಕಾಲ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಹಲವು ಸಂಘ ಸಂಸ್ಥೆಗಳ, ಜನರ ಬೇಡಿಕೆಯಿತ್ತು. ತಜ್ಞರ ಸಲಹೆಯ ಮೇರೆಗೆ ವೀಕೆಂಡ್ ಕರ್ಫ್ಯೂ ತೆಗೆಯಲಾಗಿದೆ. ನೈಟ್ ಕರ್ಫ್ಯೂ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯ ವರೆಗೆ ಮುಂದುವರೆಯಲಿದೆ. ಉಳಿದಂತೆ ಈ ಹಿಂದಿನ ನಿಯಮಗಳು ಜಾರಿಯಲ್ಲಿರಲಿವೆ. 50:50 ರೂಲ್ಸ್ ಇರಲಿದೆ. ಜನರು ಕೋವಿಡ್ ನಿಯಮ ಪಾಲಿಸಬೇಕು.
Advertisement. Scroll to continue reading.