Connect with us

Hi, what are you looking for?

Diksoochi News

ರಾಜ್ಯ

ತುಮಕೂರು: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕೆ ಎಸ್ ಆರ್ ಟಿ ಸಿ ಬಸ್; ಇಬ್ಬರು ಸ್ಥಳದಲ್ಲೇ ಸಾವು

1

ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್‌ ಆರ್ ಟಿ ಸಿ ಬಸ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲೂಕಿನ ಕಾಶಪುರ ಗ್ರಾಮದ ಬಳಿ ನಡೆದಿದೆ.

ಕಾಶಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರೈತ ಗೋಪಾಲ ನಾಯ್ಕ್ ಮತ್ತು ಭಿಕ್ಷುಕರೊಬ್ಬರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬಸ್ ನಿರ್ವಾಹಕನ ಕಾಲು ಮುರಿದಿದೆ ಎನ್ನಲಾಗಿದೆ.

ಘಟನೆಯಲ್ಲಿ ಬಸ್ ನಲ್ಲಿದ್ದ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.

ಅಪಘಾತದ ಬಳಿಕ ಕೆಎಸ್ ಆರ್ ಟಿಸಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!