ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ 2 ನೇ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ(30 ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
30 ವರ್ಷದ ಸೌಂದರ್ಯ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 2018ರಲ್ಲಿ ಸೌಂದರ್ಯ ಡಾ. ನೀರಜ್ರನ್ನು ಮದುವೆಯಾಗಿದ್ದು, ಇವರಿಗೆ ಒಂದು ಮಗುವಿದೆ.
ಬೆಂಗಳೂರಿನ ಕೆ ಕೆ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ವಾಸವಾಗಿದ್ದ ಅವರು, ಪತಿ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ತೆರಳಿದ್ದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರೂಮ್ ಬಾಗಿಲು ತೆರೆಯುತ್ತಿಲ್ಲ ಎಂದು ನೀರಜ್ಗೆ ಮನೆ ಕೆಲಸದವರು ಕರೆ ಮಾಡಿದ್ದರು. ಈ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.
Advertisement. Scroll to continue reading.
ಸೌಂದರ್ಯ ಆತ್ಮಹತ್ಯೆಗೆ ಇನ್ನೂ ಕಾರಣ ಏನೆಂಬುದು ತಿಳಿದಿಲ್ಲ.
In this article:B.S.Yadiyurappa, Diksoochi t v, diksoochi udupi, Diksoochinews, soundarya
Click to comment