ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ಕರಾವಳಿ ಬೈಪಸ್ ನಿಂದ ಅಂಬಾಗಿಲು ಜಂಕ್ಷನ್ ತನಕ ದಾರಿದೀಪ ಕೆಟ್ಟುಹೋಗಿದ್ದು ಪಾದಚಾರಿಗಳು ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಭಯಭೀತರಾಗಿ ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿವೆ ಈ ಸಮಸ್ಯೆಯ ಬಗ್ಗೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯ ಗಮನಸೆಳೆಯಲು ದಿನಂಪ್ರತಿ ದೊಂದಿ ಅಥವಾ ಚಿಮಣಿಯನ್ನು ಉರಿಸಿ ವಿಭಿನ್ನ ರೀತಿಯ ಪ್ರತಿಭಟನೆಗೆ ಇಂದು ಚಾಲನೆ ನೀಡಲಾಯಿತು.
ಈ ಸಂದರ್ಭ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಮಾತನಾಡಿ, ಸಮಸ್ಯೆ ಬಗೆಹರಿಯುವವರೆಗೆ ಪ್ರತಿದಿನ ಇದೇ ರೀತಿ ಅಥವಾ ಚಿಮಣಿಯನ್ನು ಆ ಉರಿಸಿ ಪಾದಚಾರಿಗಳಿಗೆ ನಮ್ಮಿಂದಾಗುವಷ್ಟು ಬೆಳಕು ನೀಡುವ ವ್ಯವಸ್ಥೆ ಮಾಡಲಾಗುವುದು ಎಂದರು.
ಈ ವೇಳೆ ಉಡುಪಿ ತಾಲೂಕು ಅಧ್ಯಕ್ಷ ಸುಧೀರ್ ಪೂಜಾರಿ, ಶಾಹಿಲ್ ರಹಮತುಲ್ಲಾ, ಮಂಜು, ನಾಸಿರ್ ಯಾಕೂಬ್, ಸುಹೇಲ್, ಇಂತಿಯಾಜ್, ಹಸನ್ ಸಾಹೇಬ್, ಅನಿಲ್ ಸೇರಿದಂತೆ 25 ಕಾರ್ಯಕರ್ತರು ಉಪಸ್ಥಿತರಿದ್ದರು.
Advertisement. Scroll to continue reading.
In this article:Ambagilu, Diksoochi news, diksoochi Tv, diksoochi udupi, protest, Udupi, Udupi Junction
Click to comment