Connect with us

Hi, what are you looking for?

Diksoochi News

ಕರಾವಳಿ

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ: ಪ್ರತಿಭಟನೆ ವೇಳೆ ಮಾರಕಾಯುಧಗಳೊಂದಿಗೆ ಬಂದಿದ್ದ ಇಬ್ಬರ ಬಂಧನ

2

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎದುರು ರಸ್ತೆಯಲ್ಲಿ ಶುಕ್ರವಾರ ಹಿಜಾಬ್ ಹಾಗೂ ಕೇಸರಿ ಶಾಲು ಧಾರಣೆಯ ವಿಚಾರದಲ್ಲಿ ಪ್ರತಿಭಟನೆ, ಚರ್ಚೆ ನಡೆಯುತ್ತಿರುವಾಗ ಮಾರಕಾಯುಧಗಳೊಂದಿಗೆ ಬಂದಿದ್ದ ಐವರು ಆರೋಪಿಗಳ ಪೈಕಿ ಇಬ್ಬರನ್ನು ಕುಂದಾಪುರ ಪಿಎಸ್ಐ ಸದಾಶಿವ ಗವರೋಜಿ ಹಾಗೂ ಸಿಬ್ಬಂದಿಗಳ ತಂಡ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲಿ ಒಂದು ಗುಂಪಿನ ವಿದ್ಯಾರ್ಥಿಗಳ ಪರವಾಗಿ 5-6 ವ್ಯಕ್ತಿಗಳು ಮಾರಕಾಯುಧಗಳೊಂದಿಗೆ ಆಗಮಿಸಿದ್ದು, ಯಾವುದೇ ಸಮಯದಲ್ಲಾದರೂ, ಸಾರ್ವಜನಿಕರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುವ ಮಾಹಿತಿ ಪಡೆದುಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

Advertisement. Scroll to continue reading.

ಬಂಧಿತರನ್ನು ಗಂಗೊಳ್ಳಿಯ ಅಬ್ದುಲ್ ಮಜೀದ್ (32) ಹಾಗೂ ರಜಬ್ (41) ಎಂದು ಗುರುತಿಸಲಾಗಿದೆ . ಖಲೀಲ್, ರಿಜ್ವಾನ್ ಹಾಗೂ ಇಫ್ತೀಕರ್ ಅವರ ಬಂಧನಕ್ಕೆ ಬಲೆ ಬೀಸಲಾಗಿದೆ.

ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!