Connect with us

Hi, what are you looking for?

Diksoochi News

ಕರಾವಳಿ

ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಕುಂದಾಪುರದ ಮೂವರ ದುರ್ಮರಣ

1

ಚಿತ್ರದುರ್ಗ: ಬೆಳ್ಳಂಬೆಳಿಗ್ಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೋಡಿ ಶ್ರೀರಾಂಪುರದ ಬಳಿ ನಡೆದಿದೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕುಂದಾಪುರದ ಗೀತಾ ( 32) ಮತ್ತು ಶಾರದಾ ( 60 ), ಮತ್ತು 5 ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದೆ.

ಮೃತರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

Advertisement. Scroll to continue reading.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಾಂಪುರದ ಬಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ 5 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ

ಕಾರಿನಲ್ಲಿದ್ದಂತ ಇತರೆ ನಾಲ್ವರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!