ಬೆಂಗಳೂರು: ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಕರ್ನಾಟಕ ಹೈಕೋರ್ಟ್ ನ ಪೂರ್ಣ ಪೀಠ ನಾಳೆ ಮಧ್ಯಾಹ್ನ ವಿಚಾರಣೆ ನಡೆಸಲಿದೆ.
ಇಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಏಕ ಸದಸ್ಯ ಪೀಠವು ಉಡುಪಿಯ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಕಳುಹಿಸಿತ್ತು. ಮಧ್ಯಂತರ ತೀರ್ಪಿನ ಕುರಿತು ಪೀಠವೇ ನಿರ್ಧರಿಸಲಿ ಎನ್ನಲಾಗಿತ್ತು.
ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ರಚನೆಯಾಗಿದ್ದು, ನಾಳೆ ಮಧ್ಯಾಹ್ನ 2.30ಕ್ಕೆ ಅರ್ಜಿಗಳ ವಿಚಾರಣೆ ನಡೆಯಲಿದೆ.
Advertisement. Scroll to continue reading.
In this article:Chief Justice Ritu Raj Awasthi, Diksoochi t v, diksoochi udupi, Diksoochinews, Hijab controversy, Justice JM Khazi, Justice Krishna S Dixit
Click to comment