ಬೆಂಗಳೂರು : ಫೆ.16ರ ಬುಧವಾರದಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ರಾಜ್ಯದಲ್ಲಿ ಸಮವಸ್ತ್ರ ವಿವಾದ ಭುಗಿಲೆದ್ದಿದ್ದು, ಈ ಸಂಬಂಧ ಸಿಎಂ ‘ಬಸವರಾಜ ಬೊಮ್ಮಾಯಿ’ ನೇತೃತ್ವದಲ್ಲಿ ಮಹತ್ವದ ನಡೆದಿದ್ದು, ಸಭೆಯ ಬಳಿಕ ಸಚಿವ ನಾಗೇಶ್ ಮಾಧ್ಯಮದವರೊಂದಿಗೆ ಮಾತನಾಡಿದರು.
ಫೆ.16 ಬುಧವಾರದಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಹೈಕೋರ್ಟ್ ಆದೇಶದಂತೆ ಕಾಲೇಜು ಆರಂಭಿಸುತ್ತಿದ್ದೇವೆ. ಎಲ್ಲರೂ ಕಡ್ಡಾಯವಾಗಿ ಹೈಕೋರ್ಟ್ ಆದೇಶ ಪಾಲಿಸಬೇಕು. ಶಾಲೆ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು ಎಂದರು.
Advertisement. Scroll to continue reading.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಸಭೆ ನಡೆದಿದ್ದು , ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
In this article:

Click to comment