Connect with us

Hi, what are you looking for?

Diksoochi News

ರಾಜ್ಯ

ಮಾಜಿ ಶಾಸಕ, ಶಿಕ್ಷಣ ತಜ್ಞ ಹೆಚ್.ಡಿ.ಚೌಡಯ್ಯ ನಿಧನ

1

ಬೆಂಗಳೂರು: ಮಾಜಿ ಶಾಸಕ, ಶಿಕ್ಷಣ ತಜ್ಞ ಹೆಚ್.ಡಿ.ಚೌಡಯ್ಯ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ಅವರು ನಾಲ್ಕು ಬಾರಿ ಶಾಸಕರು, ಎರಡು ಬಾರಿ ವಿಧಾನ ಪರಿಷತ್‌ ಸದಸ್ಯರೂ ಆಗಿದ್ದರು.

ಪಿಇಎಸ್ ಟ್ರಸ್ಟ್ ನ ಮಾಜಿ ಅಧ್ಯಕ್ಷರಾಗಿ, ಹಿರಿಯ ಸಹಕಾರಿ ಧುರೀಣರಾಗಿ, ಕಾವೇರಿ ಹೋರಾಟದ ಮುಂಚೂಣಿ ನಾಯಕರಾಗಿದ್ದರು. 4 ಬಾರಿ ಕೆರಗೋಡು ಕ್ಷೇತ್ರದ ಶಾಸಕರಾಗಿ, 2 ಬಾರಿ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನಿತ್ಯ ಸಚಿವ ಕೆ.ವಿ.ಶಂಕರಗೌಡರ ಬಳಿಕ ಮಂಡ್ಯದ ಪ್ರತಿಷ್ಟಿತ ಪಿಇಟಿ ಸಂಸ್ಥೆಯ ಅಧ್ಯಕ್ಷರಾಗಿ 31 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಕೀರ್ತಿ ಚೌಡಯ್ಯರದು.

Advertisement. Scroll to continue reading.

ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರರೂ ಆಗಿದ್ದ ಹೆಚ್.ಡಿ.ಚೌಡಯ್ಯ ಅವರ ನಿಧನ ನನಗೆ ಬಹಳ ನೋವನ್ನುಂಟು ಮಾಡಿದೆ ಎಂದು ಸಂತಾಪ ಸೂಚಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!