ನವದೆಹಲಿ : ರಷ್ಯಾ-ಉಕ್ರೇನ್ ಬಿಕ್ಕಟ್ಟು ಬಗೆಹರಿಸಲು ಭಾರತ ಮಧ್ಯ ಪ್ರವೇಶಿಸಬೇಕು ಎಂದು ಉಕ್ರೇನ್ ರಾಯಭಾರಿ ಪೊಲಿಖಾ ಹೇಳಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸುವಂತೆ ಉಕ್ರೇನ್ ಮನವಿ ಮಾಡಿದ್ದು, ಮೋದಿ ವಿಶ್ವದ ಅತ್ಯಂತ ಶಕ್ತಿಶಾಲಿ ನಾಯಕರಾಗಿದ್ದು, ಮೋದಿ ಹೇಳಿದರೆ ಪುಟೀನ್ ಕೇಳುತ್ತಾರೆ ಎಂದು ಹೇಳಿದ್ದಾರೆ.
ಭಾರತದಲ್ಲಿನ ಉಕ್ರೇನ್ ರಾಯಭಾರಿ ಪೊಲಿಖಾ ಮಾತನಾಡಿ, ‘ಉಕ್ರೇನ್ನಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದು, ವಿಶ್ವಕ್ಕೆ ಶಾಂತಿ ತರುವ ಸಾಮರ್ಥ್ಯ ಭಾರತಕ್ಕಿದೆ’ ಎಂದಿದ್ದಾರೆ. ಭಾರತ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು. ಇನ್ನು ಉಕ್ರೇನ್ನಲ್ಲಿ 20,000 ಭಾರತೀಯ ವಿದ್ಯಾರ್ಥಿಗಳಿದ್ದು, ಅವರಲ್ಲಿ ಕೆಲವರು ಯುದ್ಧದಿಂದ ಸಿಲುಕಿಕೊಂಡಿದ್ದಾರೆ ಎಂದು ಪೋಲಿಖಾ ತಿಳಿಸಿದ್ದಾರೆ.
Advertisement. Scroll to continue reading.
In this article:Diksoochi news, diksoochi Tv, diksoochi udupi, PM Modi, Russia, Ukraine
Click to comment