Connect with us

Hi, what are you looking for?

Diksoochi News

ರಾಷ್ಟ್ರೀಯ

ಅಗ್ನಿ ಅವಘಡ; ಎಂಟು ತಿಂಗಳ ಮಗು ಸೇರಿ ಐವರು ಸಜೀವ ದಹನ

1

ಕೊಚ್ಚಿನ್ : ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಐದು ಜನರು ಸಾವನ್ನಪ್ಪಿರುವ ಘಟನೆ ಕೇರಳದ ವರ್ಕಲಾದಲ್ಲಿ ನಡೆದಿದೆ.

ಮೃತರನ್ನು ಪ್ರತಾಪನ್ (64), ಅವರ ಪತ್ನಿ ಶೇರ್ಲಿ (53), ಕಿರಿಯ ಮಗ ಅಖಿಲ್ (25), ಹಿರಿಯ ಮಗನ ಪತ್ನಿ ಅಭಿರಾಮಿ (24) ಮತ್ತು ಎಂಟು ತಿಂಗಳ ಮೊಮ್ಮಗ ರಾಯನ್ ಮೃತಪಟ್ಟವರು.

ಬೆಳಗಿನ ಜಾವ 1.45 ರ ಸುಮಾರಿಗೆ ವರ್ಕಾಲದ ದಳವಪುರಂನ ಮನೆಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದಾರೆ.

Advertisement. Scroll to continue reading.

ಮನೆಯ ಹೊರಗೆ ನಿಲ್ಲಿಸಿದ್ದ ಕನಿಷ್ಠ ಐದು ಬೈಕ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಮನೆಯಿಂದ ಹೊಗೆ ಬರುತ್ತಿರುವುದನ್ನು ಕಂಡ ನೆರೆಹೊರೆಯವರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಬೆಂಕಿಯು ಮನೆಯನ್ನು ಸಂಪೂರ್ಣವಾಗಿ ಆವರಿಸಿದೆ ಎನ್ನಲಾಗಿದೆ.

ಶಾರ್ಟ್ ಸರ್ಕ್ಯೂಟ್ ಅಗ್ನಿ ಅನಾಹುತಕ್ಕೆ ಕಾರಣ ಎನ್ನಲಾಗುತ್ತಿದ್ದು, ತನಿಖೆ ಮುಂದುವರೆದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!