ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ರೈತರಿಗೆ ಪಹಣಿ, ಜಮೀನಿನ ನಕ್ಷೆ, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ಬಂದಿದ್ದರೆ ಅದು ನಮ್ಮ ಸರ್ಕಾರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಮೊದಲ ಕಾರ್ಯಕ್ರಮ ಎನ್ನಲು ಹೆಮ್ಮೆ ಎನಿಸುತ್ತದೆ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ವಿ ಸುನಿಲ್ ಕುಮಾರ್ ಹೇಳಿದರು.
ಅವರು ಶನಿವಾರ ಹೆಬ್ರಿ ತಾಲ್ಲೂಕು ವರಂಗ ಗ್ರಾಮ ಪಂಚಾಯಿತಿಯಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿಯ ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ ಯೋಜನೆಯನ್ನು ರೈತರಿಗೆ ಪಹಣಿ, ಜಮೀನಿನ ನಕ್ಷೆ, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.


ರೈತರು ಸಹಿತ ಎಲ್ಲರಿಗೂ ಮುಂದಿನ ಒಂದೇರಡು ತಿಂಗಳಲ್ಲಿ ದಾಖಲೆಗಳು ಪ್ರತಿ ಮನೆಗೂ ತಲುಪಲಿದೆ, ಇದರಿಂದ ಜನತೆ ಜಮೀನುಗಳ ದಾಖಲೆಗಳಿಗಾಗಿ ತಾಲ್ಲೂಕು ಕಚೇರಿಗೆ ಅಲೆದಾಡುವುದು ತಪ್ಪುತ್ತದೆ ಎಂದು ಸುನಿಲ್ ಕುಮಾರ್ ಹೇಳಿದರು.
ಹೆಬ್ರಿ ತಹಶೀಲ್ಧಾರ್ ಪುರಂದರ್ ಕೆ ಯೋಜನೆಯ ಮಾಹಿತಿ ನೀಡಿದರು.ವರಂಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಹೆಬ್ಬಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಹರೀಶ ಪೂಜಾರಿ, ಂದಾಯ ನಿರೀಕ್ಷಕ ಹಿತೇಶ್ ಯುಬಿ, ಗ್ರಾಮ ಲೆಕ್ಕಾಧಿಕಾರಿ ರಾಚಪ್ಪಾಜಿ, ಜನಪ್ರತಿನಿಧಿಗಳು, ಸ್ಥಳೀಯ ಪ್ರಮುಖರು ಭಾಗವಹಿಸಿದ್ದರು.