ಬೆಂಗಳೂರು: ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ನಾಲಕೆ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ.
ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಮುಖ್ಯ ಅರ್ಜಿಗಳು 25ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಸತತ 11 ದಿನಗಳ ಕಾಲ ಹೈಕೋರ್ಟ್ ವಿಚಾರಣೆ ನಡೆಸಿತ್ತು.
Advertisement. Scroll to continue reading.