ಲಖನೌ: ಉತ್ತರ ಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ್ ಮಾರ್ಚ್ 25 ರಂದು ಪ್ರಮಾಣವಚನ ಸಮಾರಂಭವನ್ನು ನಡೆಯಲಿದೆ ಎಂದು ಎ ಎನ್ ಐ ವರದಿ ಮಾಡಿದೆ. ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಐದು ವರ್ಷಗಳ ಯಶಸ್ವಿ ಆಡಳಿತದ ನಂತರ ಯುಪಿಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಪಕ್ಷ 37 ವರ್ಷಗಳ ಹಿಂದಿನ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ಎರಡನೇ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಮಾರ್ಚ್ 25 ರಂದು ಶಹೀದ್ ಪಥ್‌ನ ಏಕಾನಾ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗೆ ಇತರೆ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಸರ್ಕಾರದ ಹಲವು ಸಚಿವರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಮತ್ತು ಬಿಜೆಪಿಯ ಹಿರಿಯ ಪದಾಧಿಕಾರಿಗಳು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.