ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರ ಹಾಗೂ ವಿವಿಧ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಮುಂದಿನ 2 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸರ್ಕಾರಿ ಪದವಿಪೂರ್ವ ಕಾಲೇಜು ಇಲ್ಲಿನ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.
ಹಾಗೆ ಮೊರಾರ್ಜಿ ವಸತಿ ಶಾಲೆ ಕೋಟೇಶ್ವರ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ನಿವೇದಿತಾ ಪ್ರೌಢಶಾಲೆ ಬಸ್ರೂರಿನ ದೈಹಿಕ ಶಿಕ್ಷಣ ಶಿಕ್ಷಕ ರಾಜಾರಾಮ್ ಶೆಟ್ಟಿ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
Advertisement. Scroll to continue reading.