ಬೆಂಗಳೂರು : ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹೊರಮಾವು ಸೇತುವೆ ಸಮೀಪ ರೈಲಿಗೆ ತಲೆ ಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚೈತನ್ಯ (19) ಮತ್ತು ಸಿರೀಶ್ (20) ಎಂದು ಮೃತಪಟ್ಟವರು. ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
Advertisement. Scroll to continue reading.
ಶುಕ್ರವಾರ ರಾತ್ರಿ 7.30 ರ ಸುಮಾರಿಗೆ ಕಾಕಿನಾಡ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಇವರಿಬ್ಬರು ಪ್ರೇಮದ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.