ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಖಾಸಗಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕಿನ್ನಿಗುಡ್ಡೆ ಎಸ್ ಆರ್ ಸ್ಕೂಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಶಿವಮೊಗ್ಗದಿಂದ ಉಡುಪಿಗೆ ಸಾಗುತ್ತಿದ್ದ ಖಾಸಗಿ ಮಿನಿ ಬಸ್ಸೊಂದು ಬುಧವಾರ ಬೆಳಿಗ್ಗೆ 8.30 ಕ್ಕೆ ಹೆಬ್ರಿಯ ಎಸ್ ಆರ್ ಸ್ಕೂಲ್ ಕಿನ್ನಿಗುಡ್ಡೆ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ.
ಬಸ್ಸಿನ ಸ್ಟೇರಿಂಗ್ ಎಂಡ್ ಕಟ್ಟಾದ ಪರಿಣಾಮ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 3 – 4 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅವರನ್ನು ಕೂಡಲೇ ಹೆಬ್ರಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಹೆಬ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.

In this article:bus accident, Diksoochi news, diksoochi Tv, diksoochi udupi, hebri, Kinnigudde

Click to comment