ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ನಮ್ಮ ಯಶಸ್ಸು ಇತರರಿಗೆ ಪ್ರೇರಣೆಯಾಗಬೇಕು, ಆ ಮೂಲಕ ನಾವು ಸಮಾಜವನ್ನು ಕಟ್ಟಿ ಬೆಳೆಸಬೇಕಿದೆ, ಯುವ ಸಮುದಾಯಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕಿದೆ, ವೈಜ್ಞಾನಿಕ ಸಂಶೋಧನ ಪರಿಷತ್ ಇಂತಹ ಕೆಲಸವನ್ನು ನಿರಂತರವಾಗಿ ಮಾಡಲಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಸುಬ್ರಹ್ಮಣ್ಯ ಭಟ್ ಹೇಳಿದರು.
ಅವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಉಡುಪಿ ಜಿಲ್ಲೆ ಹೆಬ್ರಿ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಯುಗಾದಿಯ ವೈಜ್ಞಾನಿಕ ಮಹತ್ವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಅಜ್ಞಾನದಿಂದ ಸುಜ್ಞಾನದೆಡೆಗೆ ಜನಸಮುದಾಯವನ್ನು ತಲುಪಿಸುವ ಕಾರ್ಯವನ್ನು ವೈಜ್ಞಾನಿಕ ಸಂಶೋಧನ ಪರಿಷತ್ ಮಾಡುತ್ತಿದೆ ಎಂದು ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಸಾದ್ ರಾವ್ ಹೇಳಿದರು.
ಜೀವನದಲ್ಲಿ ಕಠಿಣ ಶ್ರಮದ ಮೂಲಕ ಯಶಸ್ಸು ಸಾಧಿಸಬೇಕು ಎಂದು ಎಂದು ನಿವೃತ್ತ ಲೆಪ್ಟಿನೆಂಟ್ ಕರ್ನಲ್ ಹೆಬ್ರಿಯ ಜಗದೀಶ್ ಎಚ್ ಹೇಳಿದರು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಉಡುಪಿ ಜಿಲ್ಲೆ ಹೆಬ್ರಿ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿ ರೇಷ್ಮೆ ಇಲಾಖೆಯ ನಿವೃತ್ತ ಅಧಿಕಾರಿ ಕಬ್ಬಿನಾಲೆ ಶ್ರೀಧರ ಹೆಬ್ಬಾರ್ ಕಾಪೋಳಿ ಮತ್ತು ಹೆಬ್ರಿ ರಾಘವೇಂದ್ರ ಜನರಲ್ ಆಸ್ಪತ್ರೆಯ ಮುಖ್ಯಸ್ಥೆ ಡಾ. ಭಾರ್ಗವಿ ಆರ್ ಐತಾಳ್ ಯುಗಾದಿಯ ವೈಜ್ಞಾನಿಕ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಸಮಿತಿಯಿಂದ ಬಿ++ ಮಾನ್ಯತೆ ದೊರೆತ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಉಡುಪಿ ಜಿಲ್ಲೆ ಹೆಬ್ರಿ ತಾಲ್ಲೂಕು ಘಟಕದ ವತಿಯಿಂದ ಕಾಲೇಜಿನಲ್ಲಿ ಪ್ರಾಂಶುಪಾಲ ಡಾ.ಪ್ರಸಾದ್ ರಾವ್ ಮತ್ತು ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರನ್ನು ಅಭಿನಂದಿಸಲಾಯಿತು. ಸೇನೆಯಲ್ಲಿ ವಿವಿಧ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ಲೆಪ್ಟಿನೆಂಟ್ ಕರ್ನಲ್ ಆಗಿ ನಿವೃತ್ತರಾದ ಹೆಬ್ರಿಯ ಜಗದೀಶ ಎಚ್ ಅವರನ್ನು ಗೌರವಿಸಲಾಯಿತು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಉಡುಪಿ ಜಿಲ್ಲೆ ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಕೆ ಅಡ್ಯಂತಾಯ ಅಧ್ಯಕ್ಷತೆ ವಹಿಸಿ ಪರಿಷತ್ತಿನ ಯಶಸ್ವಿ ಮುನ್ನಡೆಗೆ ಸಹಕಾರ ಕೋರಿದರು.
ಹಿರಿಯ ಸಮಾಜ ಸೇವಕ ಎಚ್.ಭಾಸ್ಕರ ಜೋಯಿಸ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಉಡುಪಿ ಜಿಲ್ಲಾ ನಿರ್ದೇಶಕರಾದ ಮುರಳೀಧರ ಭಟ್, ಸೀತಾನದಿ ವಿಜೇಂದ್ರ ಶೆಟ್ಟಿ, ಜಿಲ್ಲಾ ಸಂಚಾಲಕ ಸುಕುಮಾರ್ ಮುನಿಯಾಲ್, ಹೆಬ್ರಿ ತಾಲ್ಲೂಕು ಘಟಕದ ಉಪಾಧ್ಯಕ್ಷ ಟಿ.ಜಿ.ಆಚಾರ್ಯ, ಕೋಶಾಧಿಕಾರಿ ಎಚ್.ಜನಾರ್ಧನ್, ಬೇಳಂಜೆ ಹರೀಶ ಪೂಜಾರಿ, ಮಹಿಳಾ ವಿಭಾಗದ ಸುಧಾ ಗಣೇಶ ನಾಯಕ್, ಸುನೀತಾ ಎ ಹೆಗ್ಡೆ, ಶಶಿಕಲಾ ಪೂಜಾರಿ, ನಿರ್ದೇಶಕ ಚಂದ್ರಶೇಖರ ಭಟ್, ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

ಬಲ್ಲಾಡಿ ಚಂದ್ರಶೇಖರ ಭಟ್ ನಿರೂಪಿಸಿ ಟ.ಜಿ.ಆಚಾರ್ಯ ಸ್ವಾಗತಿಸಿ ಜನಾರ್ಧನ್ ಎಚ್ ವಂದಿಸಿದರು.