ಬೆಂಗಳೂರು: ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನವನ್ನು, ಇನ್ಮುಂದೆ ಸಮಾನತೆಯ ದಿನವಾಗಿ ಆಚರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದುರ್ಗದ ಪರಿವರ್ತನ ಪರ ಧರ್ಮ ಸಂಸತ್ ನಲ್ಲಿ ಚಿತ್ರದುರ್ಗದ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ಬದಲು ಅವರ ಸಮಾಜಮುಖಿ ಕಾರ್ಯಗಳ ಸಾಧನೆ ಅಂಗವಾಗಿ ಆಯೋಜಿಸಲಾಗಿದ್ದ ಸಮಾನತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ವೇಳೆ ಮುರುಘಾ ಶರಣರ ಜನ್ಮದಿನವನ್ನು ಸಮಾನತೆಯ ದಿನವನ್ನಾಗಿ ಘೋಷಣೆ ಮಾಡಿದರು.
Advertisement. Scroll to continue reading.
ಕಾರ್ಯಕ್ರಮದಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಇಂಧನ ಸಚಿವ ವಿ ಸುನಿಲ್ ಕುಮಾರ್, ಶಾಸಕ ರಾಜಶೇಖರ ಪಾಟೀಲ ತೇಲ್ಕೂರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಚಿತ್ರದುರ್ಗದ ಮುರುಘಾ ಶರಣರು, ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.