ಬೆಂಗಳೂರು : ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈಶ್ವರಪ್ಪ ರಾಜೀನಾಮೆ ಅಂಗೀಕರಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ಸಿಎಂ ಬಸವರಾಜ ಬೊಮ್ಮಾಯಿಗೆ ಭೇಟಿಯಾಗಿ ಸಲ್ಲಿಕೆ ಮಾಡಿದ್ದರು. ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಈಶ್ವರಪ್ಪ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದರು. ಇಂದು ಈಶ್ವರಪ್ಪ ರಾಜೀನಾಮೆ ಪತ್ರ ಆಧರಿಸಿದ ರಾಜ್ಯಪಾಲ ಗೆಹ್ಲೋಟ್ ಅಂಗೀಕರಿಸಿದ್ದಾರೆ.
Advertisement. Scroll to continue reading.