ಬೆಂಗಳೂರು: ಇತರ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಆರ್.ಸುಧಾಕರ್ ಎಲ್ಲಾ ಅರ್ಹರು ತಮ್ಮ ಮುನ್ನೆಚ್ಚರಿಕೆ ಪ್ರಮಾಣವನ್ನು ಪಡೆದುಕೊಳ್ಳಲು ಮತ್ತು ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವ ಮೂಲಕ ಜಾಗರೂಕರಾಗಿರಿ ಎಂದು ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.
ರಾಜ್ಯದಲ್ಲಿ ಕೋವಿಡ್-19 ನಿರ್ಬಂಧಗಳನ್ನು 28ನೇ ಫೆಬ್ರವರಿ 2022 ರಿಂದ ತೆಗೆದುಹಾಕಲಾಗಿದೆ ಮತ್ತು ಕೋವಿಡ್ ಪ್ರಕರಣಗಳ ದೈನಂದಿನ ಕಡಿಮೆ ಸಂಭವವನ್ನು ಗಮನದಲ್ಲಿಟ್ಟುಕೊಂಡು ಹೊಸ ಮಾರ್ಗಸೂಚನೆ ಹೊರಡಿಸಲಾಗಿದೆ. ಪ್ರಸ್ತುತ, ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರಕರಣಗಳ ಉಲ್ಬಣವನ್ನು ಗಮನಿಸಲಾಗಿದೆ ಮತ್ತು ಕರ್ನಾಟಕದಲ್ಲಿಯೂ ಕೋವಿಡ್ ಪ್ರಕರಣಗಳ ದೈನಂದಿನ ಪ್ರಕರಣಗಳಲ್ಲಿ ಸ್ವಲ್ಪ ಹೆಚ್ಚಳ ಕಂಡುಬಂದಿದೆ.
ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಸಾರಿಗೆ ಸಮಯದಲ್ಲಿ ಸಾರ್ವಜನಿಕರು ಮುಖ ಕವಚ / ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ದಂಡದೊಂದಿಗೆ ಶಿಕ್ಷಾರ್ಹವಾಗಿರುತ್ತದೆ, ಸ್ಥಳೀಯ ಅಧಿಕಾರಿಗಳು ಅದರ ಕಾನೂನುಗಳು, ನಿಯಮಗಳು ಅಥವಾ ನಿಬಂಧನೆಗಳಿಗೆ ಅನುಗುಣವಾಗಿ ಸೂಚಿಸಬಹುದು ಅಂತ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ. ಇದಲ್ಲದೆ, ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು – ಕನಿಷ್ಠ 2 ಅಡಿ ಅಂತರವನ್ನು – ಕಾಯ್ದುಕೊಳ್ಳಬೇಕು ತಿಳಿಸಲಾಗಿದೆ.