Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಅಪಘಾತ ಪಡಿಸಿ ಸಾವಿಗೆ ಕಾರಣವಾದ ಆರೋಪಿಗೆ ಶಿಕ್ಷೆ

0

ಉಡುಪಿ: ಅತಿವೇಗ, ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸಿ, ಹಿಂಬದಿ ಕುಳಿತಿದ್ದ ಮಹಿಳೆಯ ಸಾವಿಗೆ ಕಾರಣವಾದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 

   2017 ಅಕ್ಟೋಬರ್ 21 ರಂದು ಸಂಜೆ 5.15 ರ ಸುಮಾರಿಗೆ ಪ್ರತಾಪ ಸುದರ್ಶನ ಶೆಟ್ಟಿ ಎಂಬಾತನು ಜಯಲಕ್ಷ್ಮಿ ಎಂಬ ಮಹಿಳೆಯನ್ನು ಬೈಕಿನ ಹಿಂಬದಿ ಕೂರಿಸಿಕೊಂಡು, ಅತಿವೇಗ, ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸುತ್ತಿದ್ದಾಗ, ಉಡುಪಿ ತಾಲೂಕು ಪುತ್ತೂರು ಗ್ರಾಮದ ರೊಬೋಸಾಫ್ಟ್ ಟೆಕ್ನಾಲಜೀಸ್ ಪ್ರೆöÊ ಲಿ ಕಂಪನಿಯ ಎದುರು ಚಂದ್ರಾವತಿಯವರು ಚಲಾಯಿಸುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು, ತರುಚಿದ ಗಾಯವಾಗಿzರುತ್ತದೆ. ಬೈಕ್‌ನಲ್ಲಿ ಸಹ ಸವಾರಳಾಗಿದ್ದ ಜಯಲಕ್ಷ್ಮಿಯವರು ರಸ್ತೆಗೆ ಬಿದ್ದು, ತಲೆಗೆ ಮತ್ತು ದೇಹದ ಇತರ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಆರೋಪಿಯು ಅಪಘಾತದ ನಂತರ ಬೈಕನ್ನು ನಿಲ್ಲಿಸದೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸದೇ ಸ್ಥಳದಿಂದ ಪರಾರಿಯಾಗಿರುವ ಹಿನ್ನೆಲೆ, ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. 

Advertisement. Scroll to continue reading.

     ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ ಪ್ರಕಾಶ್ ಅವರು ಆರೋಪಿ ಪ್ರತಾಪ ಸುದರ್ಶನ ಶೆಟ್ಟಿಗೆ 2 ವರ್ಷದ ಕಾರಾಗೃಹ ವಾಸ ಶಿಕ್ಷೆ ಹಾಗೂ 11500 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.    

    ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿರುತ್ತಾರೆ.

ಅಪಘಾತ ಪಡಿಸಿದ ಆರೋಪಿಗೆ ಶಿಕ್ಷೆ

ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸಿ, ಗಾಯಗೊಳಿಸಿದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.  

Advertisement. Scroll to continue reading.

  2017 ಅಕ್ಟೋಬರ್ 05 ರಂದು ಮಧ್ಯಾಹ್ನ 1.30 ರ ಸುಮಾರಿಗೆ ಶಿವಳ್ಳಿ ಗ್ರಾಮದ ಕಲ್ಸಂಕ ಗುಂಡಿಬೈಲು ಬಳಿ ಮರ್ವಿನ್ ವಿಲ್ಫೆçಡ್ ಡಿ ಸೋಜಾ ಎಂಬಾತನು ಬೈಕನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ, ದೊಡ್ಡಣಗುಡ್ಡೆ ಕಡೆಗೆ ತೆರಳಲು ದ್ವಿಚಕ್ರ ವಾಹನವನ್ನು ತಿರುಗಿಸುತ್ತಿದ್ದ ಪ್ರಕಾಶ ಶೆಟ್ಟಿಯವರ ಟಿ.ವಿ.ಎಸ್ ಜುಪಿಟರ್‌ನ ಬಲಬದಿಗೆ ಢಿಕ್ಕಿ ಹೊಡೆದ ಪರಿಣಾಮ ಪ್ರಕಾಶ ಶೆಟ್ಟಿ, ಆತನ ಹೆಂಡತಿ ಹಾಗೂ ಮಗನು ರಸ್ತೆಗೆ ಬಿದ್ದು, ಗಾಯಗೊಂಡಿರುವ ಹಿನ್ನೆಲೆ, ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ, ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ ಪ್ರಕಾಶ್ ಅವರು ಆರೋಪಿ ಮರ್ವಿನ್ ವಿಲ್ಫೆçಡ್ ಡಿ ಸೋಜಾಗೆ 6 ತಿಂಗಳ ಕಾರಾಗೃಹ ವಾಸ ಶಿಕ್ಷೆ ಹಾಗೂ 1000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.    

    ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿರುತ್ತಾರೆ.

 

Advertisement. Scroll to continue reading.

 

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!