ಬೆಂಗಳೂರು : 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಆರೋಪಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಶೀಘ್ರವೇ ಮರು ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಮಾತಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, 545 ಪಿಎಸ್ ಐ ಪರೀಕ್ಷೆ ಬರೆದಿದ್ದ 54,289 ಅಭ್ಯರ್ಥಿಗಳ ಪೈಕಿ ಪರೀಕ್ಷಾ ಅಕ್ರಮದ ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ 545 ಪಿಎಸ್ ಐ ಪರೀಕ್ಷೆ ರದ್ದು ಮಾಡಿದ್ದು, ಶೀಘ್ರವೇ ಮರು ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗುವುದು. ಆರೋಪಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.
Advertisement. Scroll to continue reading.
In this article:aaraga jnanendra, Diksoochi news, diksoochi Tv, diksoochi udupi, PSI
Click to comment