Connect with us

Hi, what are you looking for?

Diksoochi News

ಕರಾವಳಿ

ಅತ್ರಾಡಿ : ಮದಗದಲ್ಲಿ ತಾಯಿ – ಮಗಳ ಜೋಡಿ ಕೊಲೆ ಪ್ರಕರಣ; ಆರೋಪಿಯ ಬಂಧನ

3

ವರದಿ : ಬಿ.ಎಸ್.ಆಚಾರ್ಯ


ಅತ್ರಾಡಿ : ಮದಗ ತಾಯಿ ಮಗಳ ಜೋಡಿ ಕೊಲೆ
48 ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಆರೋಪಿ ಹರೀಶ. ಆರ್‌ ಯಾನೆ ಗಣೇ (29) ಬಂಧಿತ ಆರೋಪಿ.

Advertisement. Scroll to continue reading.

ಹರೀಶ ಮೃತೆ ಚೆಲುವಿಯ ದೂರದ ಸಂಬಂಧಿಯಾಗಿದ್ದು, ಈತನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆದರೂ ಗಂಡನಿಂದ ದೂರವಾಗಿರುವ ಅವಕಾಶವನ್ನು ಉಪಯೋಗಿಸಿಕೊಂಡು ಆಕೆಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದು ಚೆಲುವಿಯನ್ನು ಮದುವೆ ಆಗಬೇಕೆಂದು ಒತ್ತಾಯಿಸುತ್ತಿದ್ದನು ಎನ್ನಲಾಗಿದೆ. ಚೆಲುವಿಯು ಬೇರೆ ಗಂಡಸರೊಂದಿಗೆ ಪೋನ್‌‌ನಲ್ಲಿ ಮಾತನಾಡುತ್ತಿದ್ದಾಳೆ ಎಂಬುದಾಗಿ ಸಂಶಯದಿಂದ ದ್ವೇಷಗೊಂಡು ದಿನಾಂಕ ಮೇ 8 ರಂದು ರಾತ್ರಿ ಅವಳ ಮನೆಗೆ ತೆರಳಿ ಊಟ ಮಾಡಿ ಮಗಳು ಮಲಗಿದ ಬಳಿಕ ಚೆಲುವಿ ಬೇರೆಯವರೊಂದಿಗೆ ಪೋನಿನಲ್ಲಿ ಸಂಪರ್ಕದಲ್ಲಿರುವ ವಿಚಾರದಲ್ಲಿ ತಗಾದೆ ತೆಗೆದು ಗಲಾಟೆ ಮಾಡಿದ್ದು ಚೆಲುವಿ ಮಲಗಿದ್ದ ಸಮಯ ಚೆಲುವಿಯನ್ನು ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ. ನಂತರ ನಿದ್ರೆಯಲ್ಲಿದ್ದ ಮಗಳು ತನ್ನ ವಿರುದ್ಧ ಸಾಕ್ಷಿ ಹೇಳಬಹುದೆಂದು ಅವಳನ್ನು ಕೂಡಾ ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ನಂತರ ಚೆಲುವಿಯ ಕುತ್ತಿಗೆಯಲ್ಲಿದ್ದ ಸುಮಾರು 50,000/- ಮೌಲ್ಯದ ಚಿನ್ನದ ಸರ ಹಾಗೂ ಮೃತಳು ಉಪಯೋಗಿಸುತ್ತಿದ್ದ ಮೊಬೈಲ್‌‌‌ ಪೋನ್‌‌ನ್ನು ಸುಲಿಗೆ ಮಾಡಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ಹಿರಿಯಡ್ಕ ಪೊಲೀಸ್ ಠಾಣಾ ಸರಹದ್ದಿನ ಅತ್ರಾಡಿ ಗ್ರಾಮದ ಮದಗ ಮುಳ್ಳಗುಜ್ಜೆ ಎಂಬಲ್ಲಿ ವಾಸವಾಗಿರುವ ಚೆಲುವಿ (28) ಮತ್ತು 10 ವರ್ಷ ಪ್ರಾಯದ ಮಗಳನ್ನು ಮೇ 8 ರಂದು ರಾತ್ರಿ ಯಾರೋ ಅಪರಿಚಿತರು ಕುತ್ತಿಗೆಯನ್ನು ಹಿಸುಕಿ ಕೊಲೆ ಮಾಡಿದ್ದರು. ಈ ಬಗ್ಗೆ ಮೃತಳ ತಂಗಿ ದೇವಿ ಇವರು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾಧಿಕಾರಿಯಾದ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ವರ ನೇತೃತ್ವದಲ್ಲಿ ಪಿ.ಎಸ್.ಐ ಅನಿಲ್ ಬಿ.ಮಾದರ, ಮಧು ಬಿ.ಇ, ಪ್ರೊಬೆಷನರಿ ಪಿ.ಎಸ್.ಐ ಮಂಜುನಾಥ ಮರಬದ, ರವಿ ಬಿ. ಕಾರಗಿ ಸಿಬ್ಬಂದಿಯವರಾದ ರಾಘವೇಂದ್ರ ಮತ್ತು ನಿತಿನ್‌ ರವರ ವಿಶೇಷ ತಂಡವು ಪ್ರಕರಣ ದಾಖಲಾಗಿ 48 ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅನಂತಪದ್ಮನಾಭ, ವೃತ್ತ ನಿರೀಕ್ಷಕ, ಬ್ರಹ್ಮಾವರ

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ ಎನ್‌, ಐ.ಪಿ.ಎಸ್‌‌, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್‌ .ಟಿ ಸಿದ್ದಲಿಂಗಪ್ಪ ರವರ ಮಾರ್ಗದರ್ಶನದಂತೆ, ಸುಧಾಕರ ಎಸ್‌ ನಾಯ್ಕ, ಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪ ವಿಭಾಗ, ಉಡುಪಿ ರವರ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಅನಂತ ಪದ್ಮನಾಭ, ಸಿ.ಪಿ.ಐ ಬ್ರಹ್ಮಾವರ, ಹಿರಿಯಡ್ಕ ಠಾಣಾ ಪಿ.ಎಸ್.ಐ ಅನಿಲ್‌ ಬಿ. ಮಾದರ, ಕೋಟ ಠಾಣೆಯ ಪಿ.ಎಸ್‌‌.ಐ ಮಧು ಬಿ.ಇ, ಹಿರಿಯಡ್ಕ ಠಾಣೆಯ ಪ್ರೊಬೆಷನರಿ ಪಿ.ಎಸ್.ಐ ಮಂಜುನಾಥ ಮರಬದ ಮತ್ತು ರವಿ ಬಿ.ಕಾರಗಿ ಬ್ರಹ್ಮಾವರ ವೃತ್ತ ಕಛೇರಿಯ ಎ.ಎಸ್.ಐ ಕೃಷ್ಣಪ್ಪ, ಪ್ರದೀಪ್‌ ನಾಯಕ, ವಾಸುದೇವ ಪಿ, ರವೀಂದ್ರ ಹೆಚ್‌. ಶೇಖರ ಸೇರಿಗಾರ ಹಿರಿಯಡ್ಕ ಠಾಣೆಯ ಎ.ಎಸ್.ಐ ಗಂಗಪ್ಪ & ಜಯಂತ, ಸಿಬ್ಬಂದಿಯವರಾದ ರಘ, ಸದಾಶಿವ, ರಾಘವೇಂದ್ರ ಕೆ, ದಯಾನಂದ ಪ್ರಭು, ಉದಯ ಕಾಮತ್‌‌, ರಾಜೇಶ ಡಿ ಗಾರ್‌, ಸುರೇಖಾ, ರಾಕೇಶ ಶೆಟ್ಟಿ, ನಿತಿನ್‌, ಭೀಮಪ್ಪ, ಅಶೋಕ, ಸಂತೋಷ, ಕಾರ್ತಿಕ, ಆನಂದ ಕೋಟ ಠಾಣೆಯ ಗಣೇಶ, ರಾಘವೇಂದ್ರ ಬ್ರಹ್ಮಾವರ ಠಾಣೆಯ ಪ್ರವೀಣ ಶೆಟ್ಟಿಗಾರ್‌ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ತಂಡದ ಸಿಬ್ಬಂದಿಯವರಾದ ಶಿವಾನಂದ, ದಿನೇಶ ಕೊಲೆ ಪ್ರಕರಣವನ್ನು ಭೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ. ಪ್ರಕರಣವನ್ನು ಅತೀ ಶೀಘ್ರವಾಗಿ ಭೇದಿಸಿರುವುದಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ. ಎನ್‌. ಐ.ಪಿ.ಎಸ್ ರವರು ತಂಡವನ್ನು ಅಭಿನಂದಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!