ನವದೆಹಲಿ : ಟಿಬೆಟ್ ಏರ್‌ಲೈನ್ಸ್‌ನ ವಿಮಾನವೊಂದು ರನ್‌ವೇ ಮೇಲೆ ಜಾರಿ ಬಿದ್ದು ಬೆಂಕಿ ಹೊತ್ತಿಕೊಂಡ ಘಟನೆ ಚೀನಾದ ಚಾಂಗ್‌ಕಿಂಗ್ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಏರ್‌ಲೈನ್ಸ್ ಸಿಬ್ಬಂದಿ ಮತ್ತು ವಿಮಾನದಲ್ಲಿದ್ದ 113 ಪ್ರಯಾಣಿಕರನ್ನು ಈಗ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಹಲವರಿಗೆ ಗಾಯಗಳಾಗಿವೆ ಎಂದು ಸರ್ಕಾರಿ ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ.
ಸಾಮಾಜಿಕ ಮಾಧ್ಯಮದಲ್ಲಿ, ವೀಡಿಯೋ ಪ್ರಸಾರವಾಗಿದೆ. ಚೀನಾದ ಟಿಬೆಟ್ ಏರ್‌ಲೈನ್ಸ್‌ನ ಪ್ರಯಾಣಿಕ ವಿಮಾನವು ನೈಋತ್ಯ ಚಾಂಗ್‌ಕಿಂಗ್ ನಗರದಲ್ಲಿ ಟೇಕಾಫ್ ಆಗುವಾಗ ರನ್‌ವೇಯಿಂದ ಸ್ಕಿಡ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಟಿಬೆಟ್ ಏರ್‌ಲೈನ್ಸ್ ವಿಮಾನದಿಂದ ಜ್ವಾಲೆ ಮತ್ತು ಕಪ್ಪು ಹೊಗೆ ಹೊರಹೊಮ್ಮುವುದನ್ನು ತೋರಿಸಿದೆ. ಉರಿಯುತ್ತಿರುವ ವಿಮಾನದಿಂದ ಪ್ರಯಾಣಿಕರನ್ನು ಹೊರತೆಗೆಯುತ್ತಿದ್ದಂತೆ ಜನರು ಓಡಿಹೋಗುತ್ತಿರುವುದು ವಿಡಿಯೋದಲ್ಲಿದೆ.
ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.