Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ನ್ಯೂಯಾರ್ಕ್‌ ನ ಸೂಪರ್ ಮಾರ್ಕೆಟ್ ನಲ್ಲಿ ವ್ಯಕ್ತಿಯಿಂದ ಗುಂಡಿನ ದಾಳಿ; 10 ಮಂದಿ ಸಾವು

1

ನ್ಯೂಯಾರ್ಕ್: ಬಂದೂಕುಧಾರಿಯೊಬ್ಬ ನ್ಯೂಯಾರ್ಕ್‌ ನ ಬಫಲೋದ ಸೂಪರ್ ಮಾರ್ಕೆಟ್ ನಲ್ಲಿ ರೈಫಲ್ ನಿಂದ ಗುಂಡು ಹಾರಿಸಿದ್ದು, ಪರಿಣಾಮ ಕನಿಷ್ಠ 10 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಬಂದೂಕುಧಾರಿ ವ್ಯಕ್ತಿಯೊಬ್ಬ ಸುರಕ್ಷಾ ಕವಚ ಹಾಗೂ ಹೆಲ್ಮೆಟ್ ಧರಿಸಿ ಸೂಪರ್ ಮಾರ್ಕೆಟ್ ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತಪಟ್ಟ 10 ಮಂದಿಯ ಪೈಕಿ ಹಲವರು ಆಫ್ರಿಕನ್ ಅಮೆರಿಕನ್ನರು ಎನ್ನಲಾಗಿದೆ. ದಾಳಿ ನಡೆಸಿದ ದುಷ್ಕರ್ಮಿ ದಾಳಿ ಕೃತ್ಯವನ್ನು ಕ್ಯಾಮೆರಾದಲ್ಲಿ ಲೈವ್ ಸ್ಟ್ರೀಮ್ ಮಾಡಿದ್ದಾನೆಂದು ಹೇಳಲಾಗಿದೆ.

Advertisement. Scroll to continue reading.

ಮೊದಲು ಪಾರ್ಕಿಂಗ್‌ ಸ್ಥಳದಲ್ಲಿದ್ದ ನಾಲ್ಕು ಜನರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ, ಬಳಿಕ ಸೂಪರ್‌ಮಾರ್ಕೆಟ್‌ ಒಳಗೆ ನುಗ್ಗಿ ದಾಳಿ ಮಾಡಿದ್ದಾನೆ. ಮೃತಪಟ್ಟವರಲ್ಲಿ ಒಬ್ಬರು ನಿವೃತ್ತ ಪೊಲೀಸ್‌ ಅಧಿಕಾರಿಯಾಗಿದ್ದು, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅವರು ಮೃತಪಡುವ ಮುನ್ನ ದಾಳಿಕೋರನ ಮೇಲೆ ಹಲವು ಸುತ್ತಿನ ಪ್ರತಿದಾಳಿ ನಡೆಸಿದ್ದರು ಎಂದು ತಿಳಿದುಬಂದಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ದಾಳಿಕೋರ ತನ್ನ ಕುತ್ತಿಗೆ ಬಳಿಗೆ ಗನ್‌ ಹಿಡಿದುಕೊಂಡು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣವನ್ನು ದ್ವೇಷ ಅಪರಾಧ ಮತ್ತು ಜನಾಂಗೀಯ ಪ್ರೇರಿತ ಕೃತ್ಯವೆಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಬಫಲೊದಲ್ಲಿರುವ ಫೆಡರಲ್‌ ಬ್ಯೂರೊ ಆಫ್‌ ಇನ್ವೆಸ್ಟಿಗೇಷನ್‌ (ಎಫ್‌ಬಿಐ) ಕಚೇರಿಯ ಉಸ್ತುವಾರಿ ಅಧಿಕಾರಿ ಸ್ಟೀಫನ್‌ ಬೆಲೊಂಗಿಯಾ ಮಾಹಿತಿ ನೀಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!