ಕೋಟ: ವಡ್ಡರ್ಸೆ ಗ್ರಾಮಪಂಚಾಯತ್ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆಯ ಹಿಂಭಾಗದಲ್ಲಿ ಅರಣ್ಯ ಪ್ರದೇಶದಲ್ಲಿ ಸಾಧಾರಣ ಗಾತ್ರದ ಗೋರಿಲ್ಲವೊಂದು ಕಾಣಿಸಿಕೊಂಡಿದೆ ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ ಸ್ಥಳೀಯರೊರ್ವರು ಅರಣ್ಯ ಇಲಾಖೆಯ ಬ್ರಹ್ಮಾವರ ವ್ಯಾಪ್ತಿಯ ಅಧಿಕಾರಿಗಳ ಕದ ತಟ್ಟಿದ ಘಟನೆ ನಡೆದಿದೆ.
ಈ ಕುರಿತಂತೆ ಗ್ರಾಮಸ್ಥರು ಅರಣ್ಯ ಇಲಾಖಾಧಿಕಾರಿಗಳೊಂದಿಗೆ ತೆರಳುವಷ್ಟರಲ್ಲಿ ಗೋರಿಲ್ಲ ಮಂಗಮಾಯವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಅಕ್ಷಿತ ಭೇಟಿ ನೀಡಿ ಪರಿಶೀಲಿಸಿದ್ದು, ಸುಮಾರು ಎಂಟು ಎಕ್ರೆ ವಿಸ್ತೀರ್ಣದ ಕಾಡು ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದರೂ ಗೋರಿಲ್ಲ ಪತ್ತೆಹಚ್ಚಲು ಆಗಲಿಲ್ಲ ಎಂಬ ಮಾಹಿತಿ ಮಾಧ್ಯಮಕ್ಕೆ ನೀಡಿದ್ದಾರೆ.
ಸದ್ಯಕ್ಕೆ ಈ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ.
ವರದಿ: ದಿನೇಶ್ ರಾಯಪ್ಪನ ಮಠ
Advertisement. Scroll to continue reading.