Connect with us

Hi, what are you looking for?

Diksoochi News

ಸಿನಿಮಾ

ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ನಿಧನ; ಸಾವಿಗೆ ಕಾರಣವಾಯ್ತ ಫ್ಯಾಟ್ ಸರ್ಜರಿ !?

1

ಬೆಂಗಳೂರು: ಕಿರುತೆರೆ ನಟಿ ಚೇತನಾ ರಾಜ್ (21) ನವರಂಗ್ ಸರ್ಕಲ್ ನ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ಚೇತನಾ ರಾಜ್ ಕುಟುಂಬ ವಾಸವಿತ್ತು. ಪೋಷಕರಿಗೆ ಮಾಹಿತಿ ನೀಡದೇ ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳಲು ನಟಿ ಮುಂದಾಗಿದ್ದರು. ನಿನ್ನೆ ಬೆಳಿಗ್ಗೆ 9.30 ಕ್ಕೆ ಆಸ್ಪತ್ರೆಗೆ ದಾಖಲಾಗಿ ಸರ್ಜರಿ ಮಾಡಿಸಿಕೊಂಡಿದ್ದರು. ನಂತರ ವಿಚಾರ ಗೊತ್ತಾಗಿ ಶೆಟ್ಟಿ ಆಸ್ಪತ್ರೆಗೆ ಪೋಷಕರು ಧಾವಿಸಿದ್ದರು. ಶಸ್ತ್ರಚಿಕಿತ್ಸೆ ವೇಳೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು ಪರಿಸ್ಥಿತಿ ಗಂಭೀರವಾಗಿತ್ತು. ನಾಲ್ಕು ಗಂಟೆಗೆ ಹೆಚ್ಚಿನ ಚಿಕಿತ್ಸೆಗೆ ಪ್ರಯತ್ನಿಸಲಾಯಿತು. ಆದರೆ ಅಷ್ಟರಲ್ಲಿ ಚೇತನಾ ಮೃತಪಟ್ಟಿದ್ದರು ಎನ್ನಲಾಗಿದೆ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಲೇ ಚೇತನಾ ರಾಜ್ ಮೃತಪಟ್ಟಿದ್ದಾರೆ‌ ಎಂದು ಪೋಷಕರು ದೂರಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಬರುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಧಾರಾವಾಹಿಗಳಲ್ಲಿ ಚೇತನಾ ರಾಜ್ ನಟಿಸುತ್ತಿದ್ದರು. ಇನ್ನೂ ಬಿಡುಗಡೆಯಾಗದ ‘ಹವಾಯಾಮಿ’ ಸಿನಿಮಾದಲ್ಲೂ ನಟಿಸಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!