Connect with us

Hi, what are you looking for?

ಅಂತಾರಾಷ್ಟ್ರೀಯ

ಬಾಕ್ಸಿಂಗ್ ರಿಂಗ್ ನಲ್ಲಿಯೇ ಹೃದಯಾಘಾತ; ಚಾಂಪಿಯನ್ ಮೂಸಾ ಯಮಕ್ ನಿಧನ

1

ಬರ್ಲಿನ್: ಎದುರಾಳಿ ಜೊತೆ ಬಾಕ್ಸಿಂಗ್ ಆಡುತ್ತಿದ್ದಾಗಲೇ ರಿಂಗ್ ನಲ್ಲಿಯೇ ಹೃದಯಾಘಾತಕ್ಕೊಳಗಾಗಿ ಯುವ ಬಾಕ್ಸರ್ ಮೂಸಾ ಯಮಕ್ ಸಾವನ್ನಪ್ಪಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು.

ವೃತ್ತಿಪರ ಬಾಕ್ಸಿಂಗ್ ನಲ್ಲಿ ಸೋಲಿಲ್ಲದ ಸರದಾರನಾಗಿದ್ದ ಯಂಗ್ ಬಾಕ್ಸರ್ ಇಲ್ಲಿಯವರೆಗೆ ತಾವು ಆಡಿರುವ 75 ಪಂದ್ಯಗಳಲ್ಲಿ ಎದುರಾಳಿಗಳ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಜರ್ಮನಿಯಲ್ಲಿ ವಾಸವಾಗಿದ್ದ ಬಾಕ್ಸರ್ ಮೂಸಾ ಯಮಕ್, ಕೇವಲ 12ನೇ ವಯಸ್ಸಿನಲ್ಲಿದ್ದಾಗಲೇ ಬಾಕ್ಸಿಂಗ್ ವೃತ್ತಿ ಬದುಕು ಆರಂಭಿಸಿದ್ದರು. WBF ಮತ್ತು GBU ಸ್ಪರ್ಧೆಗಳಲ್ಲಿ ಭಾಗಿಯಾಗಿ, ವಿಜಯಶಾಲಿಯಾಗಿದ್ದ ಇವರು ಹೆವಿವೇಯ್ಟ್ ಬಾಕ್ಸಿಂಗ್‌ನಲ್ಲಿ ಯುರೋಪಿಯನ್-ಏಷ್ಯನ್ ಚಾಂಪಿಯನ್ ಸಹ ಆಗಿದ್ದರು.

Advertisement. Scroll to continue reading.

ಜರ್ಮನಿಯ ಮ್ಯೂನಿಚನ್ ನಲ್ಲಿ ಬುಧವಾರ ನಡೆದ 84+ ಕೆಜಿ ಬಾಕ್ಸಿಂಗ್ ಪಂದ್ಯದ ಮೂರನೇ ಸುತ್ತಿನಲ್ಲಿ ಅವರು ಎದುರಾಳಿ ಉಗಾಂಡದ ಹಂಜಾ ವಂಡೆರಾ ವಿರುದ್ಧ ಮೂಸಾ ಯಮಕ್ ಸೆಣಸುತ್ತಿದ್ದರು. ಈ ಸಂದರ್ಭ ದಿಢೀರ್ ಹೃದಯಾಘಾತಕ್ಕೊಳಗಾಗಿ, ಕುಸಿದು ಬಿದ್ದಿದ್ದರು. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಸಾವನ್ನಪ್ಪಿದ್ದಾರೆಂದು ವೈದ್ಯರ ತಂಡ ಘೋಷಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!