Connect with us

Hi, what are you looking for?

ರಾಷ್ಟ್ರೀಯ

ಕಾಶ್ಮೀರ ಪ್ರತ್ಯೇಕವಾದಿ ಉಗ್ರ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ

1

ನವದೆಹಲಿ : ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಮತ್ತು ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (JKLF) ಮುಖ್ಯಸ್ಥ ಯಾಸಿನ್ ಮಲಿಕ್ ದೆಹಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.  ಅಷ್ಟೇ ಅಲ್ಲ, 10 ಲಕ್ಷ ರೂ. ದಂಡ ಕಟ್ಟುವಂತೆಯೂ ಆದೇಶ ನೀಡಿದೆ.

ಪಟಿಯಾಲ ಹೌಸ್ ಕೋರ್ಟ್‌ನ ವಿಶೇಷ ಎನ್‌ಐಎ ನ್ಯಾಯಾಧೀಶ ಪ್ರವೀಣ್ ಸಿಂಗ್ ಈ ಶಿಕ್ಷೆ ಪ್ರಕಟಿಸಿದ್ದಾರೆ. ಇದಕ್ಕಿಂತ ಮುನ್ನ ಯಾಸಿನ್ ಮಲಿಕ್ ಗೆ ಮರಣದಂಡನೆ ವಿಧಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರ ದೆಹಲಿ ಕೋರ್ಟಿಗೆ ಕೋರಿತ್ತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2017 ರಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ನಿಧಿ, ಭಯೋತ್ಪಾದನೆ ಹರಡುವಿಕೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಂಬಂಧಿಸಿದ ಆರೋಪಗಳಿಗೆ ಮಲಿಕ್ ತಪ್ಪೊಪ್ಪಿಕೊಂಡ ನಂತರ ದೆಹಲಿ ನ್ಯಾಯಾಲಯವು ಕಳೆದ ವಾರ ಮಲಿಕ್ ಅಪರಾಧಿ ಎಂದು ಘೋಷಿಸಲಾಗಿತ್ತು.

Advertisement. Scroll to continue reading.

ಯಾಸಿನ್ ಮಲಿಕ್ ವಿರುದ್ಧದ ತೀರ್ಪಿಗೆ ಮುನ್ನ ಎನ್‌ಐಎ ಮತ್ತು ದೆಹಲಿ ಪೊಲೀಸರು ಭಾರೀ ಭದ್ರತೆಯನ್ನು ಏರ್ಪಡಿಸಿದ್ದಾರೆ.

ಕಠಿಣವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣಗಳು ಸೇರಿದಂತೆ ಎಲ್ಲ ಆರೋಪಗಳಲ್ಲಿಯೂ ತಾನು ತಪ್ಪಿತಸ್ಥ ಎಂದು ಮೇ 10 ರಂದು ಯಾಸಿನ್ ಮಲಿಕ್ ತಪ್ಪೊಪ್ಪಿಕೊಂಡಿದ್ದ.

2017ರಲ್ಲಿ ಕಾಶ್ಮೀರ ಕಣಿವೆಯಲ್ಲಿ ನಡೆದ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದ ಚಟುವಟಿಕೆಯ ಆರೋಪಕ್ಕೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಾಗಿತ್ತು.

ಯಾಸಿನ್ ಮಲಿಕ್ 2019ರಿಂದಲೂ ದೆಹಲಿಯ ತಿಹಾರ್ ಜೈಲಿನಲ್ಲಿದ್ದ. ಆತನ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), 18 (ಭಯೋತ್ಪಾದನಾ ಕೃತ್ಯ ಎಸಗಲು ಸಂಚು) ಮತ್ತು 20 (ಭಯೋತ್ಪಾದನಾ ಗುಂಪು ಅಥವಾ ಸಂಘಟನೆಯ ಸದಸ್ಯನಾಗಿರುವುದು), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-B (ಅಪರಾಧ ಸಂಚು) ಮತ್ತು 124-A (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!