Connect with us

Hi, what are you looking for?

Diksoochi News

ಕರಾವಳಿ

ಮೇ 28-29 ರಂದು ಹಿರಿಯಡಕದಲ್ಲಿ ಹಲಸಿನ ಮೇಳ

2

ಹಿರಿಯಡಕ : ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ಕೃಷಿಕ ಸಂಘ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ರಿ) ಉಡುಪಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಮತ್ತು ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ಪಳ್ಳಿ ಶ್ರೀನಿವಾಸ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಹಾಗೂ ನವ್ಯೋದಯ ಫ್ರೆಂಡ್ಸ್ ಕ್ಲಬ್ ಮತ್ತು ಕೋಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್ ಹಿರಿಯಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಹಲಸಿನ ಮೇಳ-2022 ಕಾರ್ಯಕ್ರಮವು ಮೇ 28 ಮತ್ತು 29 ರಂದು ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೆ ಹಿರಿಯಡ್ಕ ಮಹತೋಭಾರ ಶ್ರೀವೀರಭದ್ರಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.

 ಕಾರ್ಯಕ್ರಮವನ್ನು ಮೇ 28 ರಂದು ಬೆಳಗ್ಗೆ 10.30 ಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹಾಗೂ ವಸ್ತು ಪ್ರದರ್ಶನವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಲಿದ್ದು, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.

  ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪ, ಕರ್ನಾಟಕ ರಾಜ್ಯ ಬಸ್ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷಿಕ ಡಾ.ಡಿ. ಚಂದ್ರಶೇಖರ್ ಚೌಟ, ಉದ್ಯಮಿ ಪಳ್ಳಿ ನಟರಾಜ್ ಹೆಗಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಉಡುಪಿ ತಹಶೀಲ್ದಾರ್ ಡಿ.ಅರ್ಚನಾ ಭಟ್, ಉಡುಪಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವಿವೇಕಾನಂದ ಗಾಂವಕರ್ ಹಾಗೂ ಮತ್ತಿತರರು ಉಪಸ್ಥಿತರಿರುವರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!