ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಕುಂದಾಪುರ ವಿಧಾನ ಸಭಾ ಕ್ಷೇತ್ರದ ಬಾರಕೂರು ಹನೆಹಳ್ಳಿ ಗ್ರಾಮ ಪಂಚಾಯತಿಯ ಬಡಾ ಕೂರಾಡಿ ರಸ್ತೆ ಕಾಂಕ್ರೀಟೀಕರಣಕ್ಕೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಂದ ಪ್ರದೇಶಾಭಿವೃದ್ಧಿ ನಿಧಿಯಿಂದ 5ಲಕ್ಷ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ನಿಧಿಯಿಂದ 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ರಸ್ತೆಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಭಾನುವಾರ ಉದ್ಘಾಟಿಸಿದರು.
ಹನೆಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ , ಗೋವಿಗಾಗಿ ಮೇವು ಅಭಿಯಾನದ ಸಂಚಾಲಕ ಪ್ರಥ್ವಿರಾಜ್ ಶೆಟ್ಟಿ , ಸ್ಥಳಿಯರಾದ ಡಾ, ಸುರೇಶ್ ಶೆಟ್ಟಿ , ಕೂರಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಅಧ್ಯಕ್ಷ ಶೇಖರ ಹೆಗ್ಡೆ , ಅಧ್ಯಾಪಕ ವಿಶ್ವನಾಥ್ ಎಮ್ . ಗ್ರಾಮ ಪಂಚಾಯತಿ ಸದಸ್ಯರಾದ ಲಕ್ಷ್ಮಣ, ವನಜ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಕೂರಾಡಿ ವಾರ್ಡ್ ಸದಸ್ಯ ಚಂದ್ರ ಮರಕಾಲ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆಯವರನ್ನು ಗ್ರಾಮಸ್ಥರ ಪರವಾಗಿ ಸನ್ಮಾನಿಸಿದರು.